November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಶಾಲೆತ್ತಡ್ಕ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಳೆಂಜ: ಶಾಲೆತ್ತಡ್ಕ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಪುಟಾಣಿ ಲಶ್ವಿ ಮತ್ತು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಸುಲೋಚನ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಎಲ್ಲಾ ಮಕ್ಕಳಿಗೆ ಹಾಗೂ ಪೋಷಕರಿಗೆಮ ಸ್ತ್ರೀಶಕ್ತಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕ್ರೀಡಾಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ, ಪೋಷಕರಿಗೆ, ಸ್ತ್ರೀಶಕ್ತಿ ಸದಸ್ಯರಿಗೆ ಬಹುಮಾನ ನೀಡಲಾಯಿತು.

ಆರೋಗ್ಯ ಕಾರ್ಯಕರ್ತೆ ರೇಖಾ, ಸಿಹೆಚ್‌ಒ ನಿಖಿತ ಮಕ್ಕಳಿಗೆ ಶುಭ ಹಾರೈಸಿದರು. ಆಶಾ ಕಾರ್ಯಕರ್ತೆ ಮೀನಾಕ್ಷಿ, ಶಾಲೆತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, ಅಂಗನವಾಡಿಯ ನಿವೃತ್ತ ಶಿಕ್ಷಕಿ ಎಲಿಯಮ್ಮ ಮಕ್ಕಳನ್ನು ಬೆಳೆಸುವ ಉಪಯುಕ್ತ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸದಸ್ಯರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಕಾರ್ಯಕರ್ತೆ ರಂಜಿನಿ ಕಾರ್ಯಕ್ರಮ ನಿರೂಪಿಸಿ, ವಾಣಿ ವಂದಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಪ್ರತಿಭಾ ಕಾರಂಜಿ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!