November 18, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ: ‘ಸ್ವಸ್ಥ್ಯ-ಪೋಷಣ್ ಸೇವಾ ಸಂಗಮ್’ ಕಾರ್ಯಕ್ರಮ: ಆರೋಗ್ಯ ತಪಾಸಣೆ ಹಾಗೂ ಜಾಗೃತಿ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನೆರಿಯ ಗ್ರಾಮ ಪಂಚಾಯತ್‌ನ ಸಂಯುಕ್ತ ಆಶ್ರಯದಲ್ಲಿ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಲೋಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಸ್ಥ್ಯ-ಪೋಷಣ್ ಸೇವಾ ಸಂಗಮ್’ ಕಾರ್ಯಕ್ರಮ ಆಯೋಜಿಸಲಾಯಿತು.

ಈ ಶಿಬಿರದಲ್ಲಿ ಪರಿಶಿಷ್ಟ ವರ್ಗದ ಸಮುದಾಯದವರಿಗೆ ಆರೋಗ್ಯ ಹಾಗೂ ಪೌಷ್ಟಿಕಾಂಶದ ಕುರಿತು ವಿಶೇಷ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸಂಚಾರಿ ಆರೋಗ್ಯ ಘಟಕದ ವೈದ್ಯಾಧಿಕಾರಿ ಡಾ. ಸುನೀಲ್ ಮತ್ತು ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಅವರು ಅಗತ್ಯ ಆರೋಗ್ಯ ಮಾಹಿತಿ ನೀಡಿದರು. ಪೌಷ್ಟಿಕ ಆಹಾರದ ಮಹತ್ವ, ಸಿಕಲ್ ಸೆಲ್, ಕಾಯಿಲೆಗಳು, ಮಹಿಳೆಯರನ್ನು ಕಾಡುವ ಆರೋಗ್ಯ ಸಮಸ್ಯೆಗಳು ಹಾಗೂ ಕ್ಯಾನ್ಸರ್ ಕಾಯಿಲೆಗಳ ಲಕ್ಷಣಗಳು ಮತ್ತು ಅವುಗಳ ತಡೆಗಟ್ಟುವಿಕೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು. ಬಳಿಕ ಸಂಚಾರಿ ಆರೋಗ್ಯ ಘಟಕದ ವೈದ್ಯಾಧಿಕಾರಿಗಳಿಂದ ಸ್ಥಳೀಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಪರಿಶಿಷ್ಟ ವರ್ಗದ ಸಮುದಾಯದವರು ಉಪಸ್ಥಿತರಿದ್ದರು.

Related posts

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಅಳದಂಗಡಿ ಸಂಪರ್ಕ ರಸ್ತೆಯಲ್ಲಿ ಮತ್ತೆ ಉರುಳಿ ಬಿದ್ದ ಮರ: ಪರದಾಡಿದ ಶಾಲಾ ಮಕ್ಕಳು

Suddi Udaya
error: Content is protected !!