November 18, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರಿನಲ್ಲಿ ವಾರ್ಷಿಕ ಕ್ರೀಡಾಕೂಟವು ನವೆಂಬರ್ 16ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿ ಮಾತನಾಡಿ ಸೋಲುಗಳಿಂದ ಪಾಠ ಕಲಿಯಬೇಕು. ಯಶಸ್ಸು ದೊರೆತಾಗ ಅಹಂಕಾರ ಪಡದೆ, ಇತರರ ಸಾಧನೆಯನ್ನು ಮೆಚ್ಚಿ ಪ್ರೋತ್ಸಾಹಿಸಬೇಕು. ಸೋಲು ಮತ್ತು ವೈಫಲ್ಯಗಳಿಂದ ಕಲಿತು, ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಗುರಿ ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿ ಅಂತರರಾಷ್ಟ್ರೀಯ ಕ್ರೀಡಾಪಟು ಯೇಸುದಾಸ್ ಪಿ.ಟಿ. ಮಾತನಾಡಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸೂಕ್ತ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಆರೋಗ್ಯ ಸುಧಾರಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ತಿಳಿಸಿದರು.

ಅತಿಥಿಗಳಾಗಿ ವಂ|ಸ್ವಾ|ಲ್ಯಾರಿ ಪಿಂಟೊ, ಚೇತನಾ, ಶ್ರೀ ನೆಲ್ಸನ್ ಲಸ್ರಾದೋ, ಪ್ರವೀಣ್ ಚಂದ್ರ ಶೆಟ್ಟಿ ಹಾಗೂ ಪ್ರೊ. ಲಿಯೋ ನೊರೊನ್ಹಾ, ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಮುಖ್ಯಸ್ಥರುಗಳು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ವಂ.ಸ್ವಾ| ದೀಪಕ್ ಲಿಯೋ ಡೇಸ, ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.

ಜೆರಾಲ್ಡ್ ಡಿಸೋಜ ಮತ್ತು ಐಡ ಡಿಕುನ್ಹ ನಿರೂಪಿಸಿ, ವಲೇರಿಯನ್ ಡಿಸೋಜ ಸ್ವಾಗತಿಸಿ, ಮಲ್ಲಿಕಾ ವಂದಿಸಿದರು. ಶಾಲೆಯ ಶಿಕ್ಷಕ ವೃಂದದವರು ಈ ಕ್ರೀಡಾಕೂಟವು ಉತ್ತಮವಾಗಿ ನೆರವೇರಲು ಸಹಕರಿಸಿದರು.

Related posts

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya
error: Content is protected !!