November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಎಂಎಲ್‌ಸಿ ಭೋಜೇ ಗೌಡ ಭೇಟಿ

ಕೊಕ್ಕಡ: ನಾಡಿನ ಬಯಲು ಆಲಯ ಘಂಟೆ ಗಣಪವೆಂದೆ ಪ್ರಸಿದ್ದಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ, ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್‌ ಶಾಸಕ ಭೋಜೇ ಗೌಡ ನ.16ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯೆ ಲೋಕೇಶ್ವರಿ ವಿನಯಚಂದ್ರ, ಉಪಸ್ಥಿತರಿದ್ದು, ಹೆಚ್‌.ಡಿ. ಕುಮಾರಸ್ವಾಮಿ ದಂಪತಿಗಳನ್ನು ದೇವಳದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.

Related posts

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya
error: Content is protected !!