November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಮಕ್ಕಳೇ ದೇಶದ ನಿಜವಾದ ಸಂಪತ್ತು ಎಂಬ ಸಂದೇಶದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಜೋಸೆಫ್ ವಹಿಸಿದ್ದರು. ದೀಪ ಬೆಳಗಿಸುವುದರೊಂದಿಗೆ ಹಾಗೂ ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವೇದಿಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಜೋಸೆಫ್, ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ, ಶಿಕ್ಷಕರ-ರಕ್ಷಕರ ಸಂಘದ ಅಧ್ಯಕ್ಷ ಅಬೂಬಕ್ಕರ್, ಉಪಾಧ್ಯಕ್ಷೆ ವೇದಾವತಿ, ವಿದ್ಯಾರ್ಥಿ ನಾಯಕ ಕೌಶಿಕ್ ಹಾಗೂ ವಿರೋಧ ಪಕ್ಷದ ನಾಯಕ ಆರ್ಯನ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆಯ ಮಹತ್ವ, ಪಂಡಿತ್ ಜವಾಹರಲಾಲ್ ನೆಹರು ಅವರ ಜೀವನ, ಮಕ್ಕಳ ಮೇಲಿನ ಅವರ ಪ್ರೀತಿ ಮತ್ತು ಕಾಳಜಿ ಹಾಗೂ ಶಿಕ್ಷಣದ ಬಗ್ಗೆ ಅವರಿಗಿದ್ದ ಅಪಾರ ಆಸಕ್ತಿಯ ಕುರಿತು ಶಿಕ್ಷಕರು ಮಕ್ಕಳಿಗೆ ತಿಳಿಸಿಕೊಟ್ಟರು. ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುವ ಉದ್ದೇಶವನ್ನೂ ವಿವರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ಬೆಳಗ್ಗೆಯಿಂದಲೇ ವಿವಿಧ ಮನರಂಜನಾ ಆಟಗಳು ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಂದ ಭಾಷಣ, ನೃತ್ಯ ಸೇರಿದಂತೆ ವಿವಿಧ ಮನರಂಜನಾ ಚಟುವಟಿಕೆಗಳು ನಡೆದವು. ಶಿಕ್ಷಕರು ಕೂಡ ಮಕ್ಕಳಿಗಾಗಿ ವಿಶೇಷ ನೃತ್ಯ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಮುಖ್ಯೋಪಾಧ್ಯಾಯರು ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆದು, ಜವಾಬ್ದಾರಿಯುತ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕೆಂದು ಕರೆ ನೀಡಿದರು.
ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಮಕ್ಕಳ ಮುಖದಲ್ಲಿನ ನಗು, ಮನದಲ್ಲಿನ ಉತ್ಸಾಹ ಹಾಗೂ ಕಾರ್ಯಕ್ರಮದಲ್ಲಿನ ಸಂಭ್ರಮ ಇಡೀ ದಿನವನ್ನು ಸ್ಮರಣೀಯವಾಗಿಸಿತು.

ಗೀತಾ ನಿರೂಪಿಸಿದರು. ರೇವತಿ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಕಳೆಂಜ: ಲಕ್ಷ್ಮಣ ಗೌಡ ನಿಧನ

Suddi Udaya

ಬೆಳ್ತಂಗಡಿ ನೂತನ ವಕೀಲರ ಕಛೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya
error: Content is protected !!