November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆ

ಬೆಳ್ತಂಗಡಿ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಸೃಜನಶೀಲತೆಯನ್ನು ಹೊರಹಾಕುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ‘181 ಮಾದರಿ’ ವಿಜ್ಞಾನ ಪ್ರದರ್ಶನ ಮತ್ತು ಸ್ಪರ್ಧೆಯು ನ.12ರಂದು ಜರುಗಿತು.

ಮುಖ್ಯ ಅತಿಥಿ ವಾಣಿ ವಿದ್ಯಾ ಸಂಸ್ಥೆಯ ಕೋಶಾಧಿಕಾರಿ ಯುವರಾಜ್ ಅನಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇವಲ ಪುಸ್ತಕದ ಬೌದ್ಧಿಕ ಅರಿವಷ್ಟೇ ಅಲ್ಲದೆ, ನಟನೆಯಿಲ್ಲದ ನೇರವಾದ ಮಾತುಗಳ ಮೂಲಕ ವಿದ್ಯಾರ್ಥಿಗಳ ನಾವೀನ್ಯತೆ ಹಾಗೂ ಸೃಜನಶೀಲತೆ ಅನಾವರಣಗೊಳ್ಳುತ್ತದೆ” ಎಂದರು.

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ವಿದ್ಯಾರ್ಥಿಗಳನ್ನು ಹುರಿದುಂಬಿಸಿ, ಇಂತಹ ವಿಜ್ಞಾನ ಮಾದರಿ ಸ್ಪರ್ಧೆಗಳು ಮಕ್ಕಳಲ್ಲಿ ಹೊಸ ಆಲೋಚನೆಗಳನ್ನು ಮತ್ತು ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಲ್ಪನಾಶಕ್ತಿಯನ್ನು ಪ್ರಾಯೋಗಿಕ ರೂಪಕ್ಕೆ ಇಳಿಸುತ್ತಿರುವ ರೀತಿ ನಿಜಕ್ಕೂ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ವಾಣಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಮತ್ತು ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕಿಯರಾದ ರೇಷ್ಮಾ ಸ್ವಾಗತಿಸಿದರು, ರಕ್ಷಿತಾ ಎಸ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya
error: Content is protected !!