November 18, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

25 ವರ್ಷಗಳ ಪ್ರಾಮಾಣಿಕ ಸೇವೆಗೆ ಕೆ. ಮಂಜುನಾಥ ಶೆಟ್ಟಿಯವರಿಗೆ ಗೌರವ ಸನ್ಮಾನ

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಪುತ್ತೂರು ಇದರ ಉಜಿರೆ ಶಾಖೆಯಲ್ಲಿ ಕಳೆದ 25 ವರ್ಷಗಳಿಂದ ದೈನಿಕ ಠೇವಣಿ ಸಂಗ್ರಹಕರಾಗಿ ಅತ್ಯಂತ ಪ್ರಾಮಾಣಿಕತೆ, ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸುತ್ತಿರುವ ನಿಡಿಗಲ್‌ನ ಕೆ. ಮಂಜುನಾಥ ಶೆಟ್ಟಿಯವರನ್ನು ಸಂಘದ ರಜತ ಮಹೋತ್ಸವದ ಶುಭ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಪುತ್ತೂರಿನ ಸವಣೂರಿನಲ್ಲಿ ಸಂಘದ ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಿಸಲಾದ ಕೇಂದ್ರ ಕಚೇರಿಯ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವದ ಸಂಭ್ರಮದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಹಾಗೂ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಮಂಜುನಾಥ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಸಂಸ್ಥೆಯ ಬೆಳವಣಿಗೆಯಲ್ಲಿ ಸುದೀರ್ಘ ಕಾಲದಿಂದ ಪ್ರಾಮಾಣಿಕ ಸೇವೆ ಸಲ್ಲಿಸುತ್ತಾ, ಗ್ರಾಹಕರ ವಿಶ್ವಾಸ ಗಳಿಸಿರುವ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿ ಅಭಿನಂದಿಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!