November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಲ್ಪಸಂಖ್ಯಾತರ ಪ್ರತ್ಯೇಕ ಸೇನಾ ತರಬೇತಿ ಟೆಂಡರ್ ರದ್ದುಗೊಳಿಸಿ: ದಿನೇಶ್ ಚಾರ್ಮಾಡಿ

ಬೆಳ್ತಂಗಡಿ: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮಾತ್ರ ಸೇನಾ ಮಾದರಿಯ ತರಬೇತಿ ನೀಡಲು ಸರ್ಕಾರ ಕರೆದಿರುವ ಟೆಂಡರ್‌ನ್ನು ತಕ್ಷಣ ರದ್ದುಗೊಳಿಸಬೇಕು. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2022 ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ಗಳನ್ನು ಯಾವುದೇ ಕಾರಣಕ್ಕೂ ಹಿಂಪಡೆಯದೆ ಯಥಾವತ್ತಾಗಿ ಮುಂದುವರಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ದಿನೇಶ್ ಚಾರ್ಮಾಡಿ ಆಗ್ರಹಿಸಿದರು.

ಅವರು ನ.16ರಂದು ಬೆಳ್ತಂಗಡಿಯ ನಂದಗೋಕುಲ ಗೋಶಾಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಅಲ್ಪಸಂಖ್ಯಾತರ ನಿರ್ದೇಶನಾಲಯವು 2026-27ನೇ ಸಾಲಿನಲ್ಲಿ ಕೇವಲ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 60 ದಿನಗಳ ಸೇನಾ ತರಬೇತಿ ನೀಡಲು ಟೆಂಡರ್ ಕರೆದಿರುವುದು ಸಂವಿಧಾನದ ಸಮಾನತೆಯ ಆಶಯಕ್ಕೆ ವಿರುದ್ಧವಾಗಿದೆ. ಧಾರ್ಮಿಕ ಆಧಾರದ ಬದಲಾಗಿ ಆರ್ಥಿಕ ಹಿಂದುಳಿದಿರುವಿಕೆಯನ್ನು ಮಾನದಂಡವಾಗಿಸಿಕೊಂಡು ಎಲ್ಲ ಸಮುದಾಯಗಳ ಅರ್ಹ ವಿದ್ಯಾರ್ಥಿಗಳಿಗೆ ಸಮಾನ ತರಬೇತಿ ನೀಡಬೇಕು ಎಂದು ಒತ್ತಾಯಿಸಿದರು.

ಬಲವಂತ, ವಂಚನೆ ಮತ್ತು ಆಮಿಷದ ಮೂಲಕ ನಡೆಯುವ ಅಕ್ರಮ ಮತಾಂತರಗಳನ್ನು ತಡೆಯುವ ಉದ್ದೇಶದಿಂದ ಜಾರಿಗೊಂಡಿರುವ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯನ್ನು ಹಿಂಪಡೆಯುವ ಅಗತ್ಯವಿಲ್ಲ. ಅದೇ ರೀತಿ ರೈತರ ಹಿತಾಸಕ್ತಿ ಹಾಗೂ ಪಶುಸಂಪತ್ತಿನ ರಕ್ಷಣೆಗೆ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಅತ್ಯಗತ್ಯವಾಗಿದ್ದು, ಎರಡೂ ಕಾಯ್ದೆಗಳನ್ನು ದುರ್ಬಲಗೊಳಿಸದೆ ಮುಂದುವರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‌ನ ನವೀನ್ ನೆರಿಯ, ತಾಲೂಕು ಅಧ್ಯಕ್ಷ ವಿಷ್ಣುಪ್ರಕಾಶ್ ಮರಾಠೆ, ರಮೇಶ್ ಧರ್ಮಸ್ಥಳ ಹಾಗೂ ಪ್ರಭಾಕರ ಮಚ್ಚಿನ ಉಪಸ್ಥಿತರಿದ್ದರು. ಬಳಿಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya
error: Content is protected !!