November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲಾ ಸುಜ್ಞಾನ ಪ್ರಶಸ್ತಿಗೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಆಯ್ಕೆ

ಉಜಿರೆ: ರಾಜ್ಯದ 12 ಜಿಲ್ಲೆಗಳ ಒಟ್ಟು 52 ಶಾಲೆಗಳು ಭಾಗವಹಿಸಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಮೋಘ ಸಾಧನೆ ಮೆರೆದಿದ್ದಾರೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ 52 ಶಾಲೆಗಳಿಗೆ ಒಟ್ಟು 1,491 ಬಹುಮಾನಗಳನ್ನು ವಿತರಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 25 ಶಾಲೆಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು. ಈ ಪೈಕಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಒಟ್ಟು 56 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಇನ್ನೊಂದು ವಿಶೇಷ ಸಾಧನೆಯೆಂದರೆ, ರಾಜ್ಯಮಟ್ಟದಲ್ಲಿ ಕೇವಲ 10 ಶಾಲೆಗಳಿಗೆ ಮಾತ್ರ ಲಭಿಸಿದ ಪ್ರತಿಷ್ಠಿತ ಅತ್ಯುತ್ತಮ ಶಾಲಾ ಪ್ರಶಸ್ತಿ (Best School Award) ಯನ್ನು ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ತನ್ನದಾಗಿಸಿಕೊಂಡಿದೆ. ಶಾಲೆಗೆ ಗೌರವಾನ್ವಿತ ‘ಕಲಾ ಸುಜ್ಞಾನ ಪ್ರಶಸ್ತಿ’ ಲಭಿಸಿರುವುದು ಸಂಸ್ಥೆಯ ಹೆಮ್ಮೆಗೆ ಮತ್ತೊಂದು ಗರಿ ಮೂಡಿಸಿದೆ.

ಈ ಅಭೂತಪೂರ್ವ ಸಾಧನೆಗೆ ಶಾಲೆಯ ವಿದ್ಯಾರ್ಥಿಗಳ ಪ್ರತಿಭೆ, ಶಿಕ್ಷಕರ ಪರಿಶ್ರಮ, ಸಮರ್ಪಣೆ ಹಾಗೂ ಸಂಘಟಿತ ಪ್ರಯತ್ನ ಪ್ರಮುಖ ಕಾರಣವಾಗಿವೆ. ವಿಶೇಷವಾಗಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ ಅವರ ನಿರಂತರ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ಸಹಕಾರ ಈ ಯಶಸ್ಸಿಗೆ ಪ್ರೇರಣೆಯಾಗಿದೆ.

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯು ಪ್ರಾಂಶುಪಾಲರಿಗೆ ಹಾಗೂ ಸ್ಪರ್ಧೆಯಲ್ಲಿ ಶ್ರಮಿಸಿದ ಕಲಾ ಶಿಕ್ಷಕಿ ರಾಜೇಶ್ವರಿ ಇವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪೋಷಕರು ಹಾಗೂ ಶಾಲಾ ಸಮುದಾಯ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಪದ್ಮುಂಜದಲ್ಲಿ ವಿದ್ಯುತ್ ಶಾಕ್‌ಗೆ ಕಾರ್ಮಿಕ ಬಲಿ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!