November 18, 2026
Uncategorized

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆಯು ಶಾಲಾ ನಾಯಕ ಕಾರ್ತಿಕ್ ವಿ ಮೂಲ್ಯರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷೆ ಲಾವಣ್ಯ ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಸಾಲ್ಯಾನ್, ಎಸ್ ಡಿ ಎಂ‌ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು.

ನೆಹರು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಅಶ್ವಿನಿ ಪಣಕಜೆ ಇವರು ಬಹುಮಾನ ನೀಡಿ ಗೌರವಿಸಿದರು. ಅಲ್ಲದೆ ಏಕ ಪೋಷಕರಿರುವ 10 ಮಂದಿ ವಿದ್ಯಾರ್ಥಿಗಳಿಗೆ ಸಾಜಿದ್ ಮದ್ದಡ್ಕ ಇವರು ಪ್ರೋತ್ಸಾಹಕ ನಗದು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮೂರು ಮಂದಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳೇ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Related posts

BMS ಹೋರಾಟಕ್ಕೆ ಫಲಶ್ರುತಿ: ಕಾರ್ಮಿಕ ಸಂಹಿತೆ ತಿದ್ದುಪಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಚಿವರ ಭರವಸೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!