November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.18: ಉಜಿರೆಯಲ್ಲಿ 9ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಉಜಿರೆ ವತಿಯಿಂದ 9ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ನ.18ರಂದು ಬೆಳಿಗ್ಗೆ 10 ಗಂಟೆಗೆ ಉಜಿರೆಯ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಸತೀಶ್ಚಂದ್ರ ಎಸ್. ಅವರು ವಹಿಸಲಿದ್ದಾರೆ. ಬೆಂಗಳೂರಿನ ಹೆಲ್ತ್‌ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಸಂಶೋಧನೆ ಮತ್ತು ಸಮಗ್ರ ವೈದ್ಯಕೀಯ ವಿಭಾಗದ ಉಪಾಧ್ಯಕ್ಷರಾದ ಡಾ. ರಾಘವೇಂದ್ರ ರಾವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ವಕ್ತಾರರಾದ ಶ್ರೀ ಎಚ್.ಎನ್. ಚಂದ್ರಶೇಖರ್ (H.N. Chandrashekar) ಅವರು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಕೃತಿ ಚಿಕಿತ್ಸೆಯ ಮಹತ್ವ, ಆರೋಗ್ಯಕರ ಜೀವನಶೈಲಿ, ಯೋಗ ಹಾಗೂ ಔಷಧರಹಿತ ಚಿಕಿತ್ಸಾ ಪದ್ಧತಿಗಳ ಕುರಿತು ಜನಜಾಗೃತಿ ಮೂಡಿಸುವುದು ಈ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಶಿವಪ್ರಸಾದ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya
error: Content is protected !!