ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ದಾಂತಗಳನ್ನು ಒಪ್ಪಿ, ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತ ವೈಖರಿಯನ್ನು ಮೆಚ್ಚಿ, ಶಾಸಕ ಹರೀಶ್ ಪೂಂಜರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮತ್ತು ಜನವಿರೋಧಿಗಳಿಗೆ ಹಾಗೂ ತಾಲೂಕು ಕಾಂಗ್ರೆಸ್ ನ ಅಸಮರ್ಥ ನಾಯಕತ್ವಕ್ಕೆ ಬೇಸತ್ತು ಪುದುವೆಟ್ಟು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಬಿಜು, ಶಿಜಿ ಹಾಗೂ ಪೌಲೋಸ್ ಅವರು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ್ ಗೌಡ, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಗೌಡ, ಮಂಡಲ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ, ಪುದುವೆಟ್ಟು ಶಕ್ತಿಕೇಂದ್ರ ಅಧ್ಯಕ್ಷ ಪೂರ್ಣಾಕ್ಷ, ಕಾರ್ಯಕರ್ತರು ಉಪಸ್ಥಿತರಿದ್ದರು














