November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಡಿ. 25 ಮತ್ತು 26 ರಂದು ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಬಗ್ಗೆ 2ನೇ ಪೂರ್ವಭಾವಿ ಸಭೆ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಸ್ಥಾನದ ಅಕ್ಷೋಭ್ಯ ಸಭಾಭವನದಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ವಹಿಸಿದ್ದರು.

ವೇದಿಕೆಯಲ್ಲಿ ಜಾತ್ರಾ ಮಹೋತ್ಸವದ ಪ್ರಧಾನ ಸಂಚಾಲಕಿ ಸರೋಜಿನಿ ಭೀಮಂಡೆ, ದೇವಸ್ಥಾನದ ಅಸ್ರಣ್ಣ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುನ್ನಾಯ,ಬೆಳಾಲುಗುತ್ತು ಮನೆಯ ಹೇಮಲತಾ ಜೀವಂಧರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಉಪಸ್ಥಿತರಿದ್ದರು.

ಸಭೆಯಲ್ಲಿ ವಿವಿಧ ಬೈಲುವಾರು ಸಮಿತಿಯ ಸದಸ್ಯರು,ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಸುಂದರ ಎಂ ಕೆ,ಜಾರಪ್ಪ ಗೌಡ ಅರಣೆ ಮಾರು, ಬಾಬು ಆಚಾರ್ಯ ಸೀತಾರಾಮ ಬಿ ಎಸ್ ,ಶ್ರೀನಿವಾಸ ಗೌಡ ಗಣಪನಗುತ್ತು, ಶಿವಕುಮಾರ್ ಬಾರಿತ್ತಾಯ ಪಾರಳ, ಅನಂತೇಶ್ವರ ಭಜನಾ ಮಂಡಳಿಯ ಪದಾಧಿಕಾರಿಗಳು,ಬೈಲುವಾರು ಸಮಿತಿಯ ಸಂಚಾಲಕರು, ಸಹಸಂಚಾಲಕರು ಮತ್ತು ಸದಸ್ಯರು, ಅನಂತೇಶ್ವರ ಫ್ರೆಂಡ್ಸ್ ಇದರ ಪದಾಧಿಕಾರಿಗಳು,ಮಹಿಳಾ ಸಮಿತಿಯ ಸದಸ್ಯರು ಮತ್ತು ಊರಿನ ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿಯ ಖಾಯಂ ಆಹ್ವಾನಿತ ಸದಸ್ಯ ಕಿರಣ್ ಸುವರ್ಣ ಇರಂತ್ಯಾರು ಸ್ವಾ ಗತಿಸಿ, ದೇವಸ್ಥಾನದ ಕಚೇರಿ ಮೇಲ್ವಿಚಾರಕ ಶಿವಪ್ರಸಾದ್ ಗೊಲ್ಲ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya
error: Content is protected !!