November 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಶವ ಪತ್ತೆಯಾದ ಜಾಗಕ್ಕೆ ಎಫ್ಎಸ್ಎಲ್ ವೈದ್ಯರ ಭೇಟಿ

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಎಸ್ಐಟಿ ಮರುತನಿಖೆ ನಡೆಸುತ್ತಿರುವ ಸಂಬಂಧ ಎಫ್.ಎಸ್.ಎಲ್ ವಿಭಾಗದ ತಜ್ಞ ವೈದ್ಯರ ತಂಡ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಸಂಬಂಧ ಎಸ್ಐಟಿ ಮುಖ್ಯಸ್ಥರಾದ ಚೇತನ್ ಸಿಂಗ್ ರಾಥೋಡ್ ಅವರು ಬೆಂಗಳೂರು, ಬೆಳಗಾವಿ, ಹಾವೇರಿಯ ನುರಿತ ಮೂವರು ಎಫ್ಎಸ್ಎಲ್ ವೈದ್ಯರ ನೇತೃತ್ವದಲ್ಲಿ ಮೆಡಿಕಲ್ ಬೋರ್ಡ್ ರಚನೆ ಮಾಡಲಾಗಿದ್ದು. ಮೆಡಿಕಲ್ ಬೋರ್ಡ್ ರಚನೆ ಮಾಡಿದ ಎಫ್.ಎಸ್.ಎಲ್ ವಿಭಾಗದ ಮೂವರು ತಜ್ಞ ವೈದ್ಯರ ತಂಡ ಸೌಜನ್ಯ ಶವ ಪತ್ತೆಯಾದ ಧರ್ಮಸ್ಥಳ ಗ್ರಾಮದ ಮಣ್ಣಸಂಕ ಸ್ಥಳಕ್ಕೆ ನ.17 ರಂದು ಸಂಜೆ 4 ಗಂಟೆಗೆ ಎಸ್ಐಟಿ ಅಧಿಕಾರಿಗಳ ಜೊತೆಯಲ್ಲಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ಮತ್ತು ಸಿಬ್ಬಂದಿ ಎಸ್ಐಟಿ ಅಧಿಕಾರಿಗಳ ಜೊತೆಯಲ್ಲದ್ದಾರೆ.

ಮೆಡಿಕಲ್ ಬೋರ್ಡ್ ತಜ್ಞ ವೈದ್ಯರ ತಂಡ ಸ್ಥಳ ಪರಿಶೀಲನೆ ನಡೆಸಿ ಬಳಿಕ ಸೌಜನ್ಯ ಶವ ಸಿಕ್ಕ ದಿನದ ಫೋಟೋ & ವಿಡಿಯೋ ಕೂಡ ಪರಿಶೀಲನೆ ನಡೆಸಿ ಕೊಲೆ ಮಾಡಿದ ಜಾಗವನ್ನು ನಿಖರವಾಗಿ ಎಸ್ಐಟಿ ಅಧಿಕಾರಿಗಳಿಗೆ ವರದಿಯನ್ನು ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related posts

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya
error: Content is protected !!