ಕೊಕ್ಕಡ: ನಾಡಿನ ಬಯಲು ಆಲಯ ಘಂಟೆ ಗಣಪವೆಂದೆ ಪ್ರಸಿದ್ದಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ, ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಶಾಸಕ ಭೋಜೇ ಗೌಡ ನ.16ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯೆ ಲೋಕೇಶ್ವರಿ ವಿನಯಚಂದ್ರ, ಉಪಸ್ಥಿತರಿದ್ದು, ಹೆಚ್.ಡಿ. ಕುಮಾರಸ್ವಾಮಿ ದಂಪತಿಗಳನ್ನು ದೇವಳದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.














