ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯ ಮಟ್ಟದ ಮಿನಿ ಕರ್ನಾಟಕ ಕ್ರೀಡಾಕೂಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕೂಕ್ರಬೆಟ್ಟು ಸರ್ಕಾರಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ತಂಡವು ಕಂಚಿನ ಪದಕ ಗೆದ್ದು ಅಮೋಘ ಸಾಧನೆ ಮಾಡಿದೆ.


ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಮತ್ತು ಯೋಗೇಂದ್ರ ಆಚಾರ್ಯ ಮಾರ್ಗದರ್ಶನ ನೀಡಿದ್ದರು.













