November 19, 2026
Uncategorized

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ: ನಾಲ್ಕು ಜಿಲ್ಲೆಗಳಮುಖ್ಯ ವಿಕ್ಷಕ ಹಾಗೂ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು ನೇಮಕ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷಕ್ಕಾಗಿ, ಕಾರ್ಮಿಕರ ಏಳಿಗೆಗಾಗಿ ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಅಬ್ದುಲ್‌ರಹಿಮಾನ್ ಪಡ್ಪು ಅವರನ್ನು ಮಂಗಳೂರು ಜಿಲ್ಲೆ, ಕೊಡಗು ಜಿಲ್ಲೆ, ಉಡುಪಿ ಜಿಲ್ಲೆ ಹಾಗೂ ಕಾರವಾರ(ಉತ್ತರ ಕನ್ನಡ)ಜಿಲ್ಲೆಯ ಮುಖ್ಯ ವೀಕ್ಷಕರು ಹಾಗೂ ಉಸ್ತುವಾರಿಯಾಗಿ ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷ ಶಾಂತವೀರ ನಾಯ್ಕ ಅವರು ಆದೇಶ ನೀಡಿದ್ದಾರೆ.

ಕಾರ್ಮಿಕ ವಿಭಾಗದ ಜಿಲ್ಲಾ ಸಮಿತಿ ರಚನೆ, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಾರ್ಡ್ ಅಧ್ಯಕ್ಷರು, ಮತ್ತು ಪದಾಧಿಕಾರಿಗಳು, ಹೋಬಳಿ ಮಟ್ಟದ (ಜಿಲ್ಲಾ ಪಂಚಾಯಿತಿ ಕ್ಷೇತ್ರದ) ವ್ಯಾಪ್ತಿಯ ಸಮಿತಿ ರಚಿಸುವುದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಚಿವರು, ಎಂ.ಎಲ್.ಎ, ಎಂಪಿ & ಪರಾಜಿತ ಅಭ್ಯರ್ಥಿಗಳು ಹಾಗೂ ಇತರೆ ಮುಖಂಡರುಗಳ ಸಹಕಾರ ಬೆಂಬಲವನ್ನು ಪಡೆದು, ಜಿಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ವಾರ್ಡ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನೇಮಕ ಮಾಡಿರುವ ಉಸ್ತುವಾರಿಗಳಿಗೆ ಸಹಕಾರ ನೀಡಿ ಅವರಿಗೆ ಸಲಹೆ, ಸೂಚನೆ, ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಅಬ್ದುಲ್ ರಹಿಮಾನ್ ಪಡ್ಪು ಅವರು ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ ನಿಯಮಿತದ ನಿರ್ದೇಶಕರಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ, ಮಡಂತ್ಯಾರು ಗ್ರಾ.ಪಂ ಮಾಜಿ ಅಧ್ಯಕ್ಷರಾಗಿ, ಮಡಂತ್ಯಾರು ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ಸರ್ವಾಂಗಾಸನದಲ್ಲಿ ಅಚಲ ಸಾಧನೆ: ವಿಶ್ವ ದಾಖಲೆ ಬರೆದ ಬಾರ್ಯದ ವಿಕಾಸ್

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya
error: Content is protected !!