November 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಕ್ಕಳ ದಿನಾಚರಣೆಯ ಪ್ರಯುಕ್ತ ಪೂರ್ವ ಪ್ರಾಥಮಿಕ ತರಗತಿಯ ಪುಟಾಣಿ ಮಕ್ಕಳಿಗಾಗಿ ವಿಶೇಷ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿವಿಧ ವೇಷಭೂಷಣಗಳಲ್ಲಿ ಕಂಗೊಳಿಸಿದ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

ಸಭಾ ಕಾರ್ಯಕ್ರಮವನ್ನು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಅಧ್ಯಕ್ಷ ಸಂಪತ್ ಕುಮಾರ್ ಸುವರ್ಣ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಜ್ಞಾನದ ಬೆಳಕು ನೀಡಿರುವ ಈ ವಿದ್ಯಾದೇಗುಲವು ಮಾದರಿ ಶಾಲೆಯಾಗಿ ರೂಪುಗೊಂಡಿದೆ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣವನ್ನು ಒದಗಿಸುತ್ತಿರುವ ಈ ವಿದ್ಯಾಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಿ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿ ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಪ್ರಭಾಕರ್ ಭಟ್ ಇಡ್ಯಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿರುವ ಸಂದರ್ಭದಲ್ಲಿ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಹೊಂದಿರುವ ಈ ವಿದ್ಯಾಸಂಸ್ಥೆಯು ವಿಶೇಷ ಸಾಧನೆ ಮಾಡಿದೆ. ಸಂಸ್ಕಾರಯುತ ಹಾಗೂ ಗುಣಾತ್ಮಕ ಶಿಕ್ಷಣವನ್ನು ನೀಡುವ ಮೂಲಕ ತಾಲೂಕಿಗೆ ಆದರ್ಶ ಶಾಲೆಯಾಗಿ ರೂಪುಗೊಂಡಿರುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಬಿಎಂಸಿ ಅಧ್ಯಕ್ಷ ಝಮೀರ್ ಸಹದಿ ವಹಿಸಿದ್ದರು.

ವೇದಿಕೆಯಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್ ಸಿ.ಎನ್., ವಾರ್ಷಿಕೋತ್ಸವ ಸಮಿತಿಯ ಕಾರ್ಯದರ್ಶಿ ದಿನೇಶ್ ಮಾಳವ, ಕ್ರೀಡಾ ಕಾರ್ಯದರ್ಶಿಗಳಾದ ಅಸ್ಮಾ ಹಾಗೂ ವನಿತಾ, ಗೌರವ ಸಲಹೆಗಾರರಾದ ಗಣೇಶ್ ಪುಂಡಾಜೆ ಹಾಗೂ ಅಕ್ಷತಾ, ಶಾಲಾ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ ಆರ್. ಮತ್ತು ಶಾಲಾ ನಾಯಕಿ ಗಣ್ಯಶ್ರೀ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿನಿಯರಾದ ಶೈವಿ ಪಿ. ಶೆಟ್ಟಿ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿ ಸಾಧನೆ ಮಾಡಿರುವುದಕ್ಕಾಗಿ ಹಾಗೂ ಕ್ಷಮಾ ಬೆಳ್ತಂಗಡಿ ದೋಸೆ ಹಬ್ಬದ ಅಂಗವಾಗಿ ನಡೆದ ತಾಲೂಕು ಮಟ್ಟದ ಬಾಲೆ ಪಿಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕಾಗಿ ಅವರ ವಿಶೇಷ ಸಾಧನೆಯನ್ನು ಗುರುತಿಸಿ ಅಭಿನಂದಿಸಲಾಯಿತು.

ಬಳಿಕ ಪೂರ್ವ ಪ್ರಾಥಮಿಕ ತರಗತಿಯ ಪುಟಾಣಿ ಮಕ್ಕಳಿಂದ ಆಕರ್ಷಕ ನೃತ್ಯ ಕಾರ್ಯಕ್ರಮ ನಡೆಯಿತು. ಮಕ್ಕಳ ಮನಮೋಹಕ ನೃತ್ಯ ಪ್ರದರ್ಶನವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಈ ಬಾರಿಯ ಮಕ್ಕಳ ದಿನಾಚರಣೆಯ ಅತ್ಯಂತ ವಿಶೇಷ ಆಕರ್ಷಣೆಯೆಂದರೆ, ಕಾರ್ಯಕ್ರಮದಲ್ಲಿ ಬರೋಬ್ಬರಿ ಒಂದು ಸಾವಿರಕ್ಕೂ ಅಧಿಕ ಬಹುಮಾನಗಳನ್ನು ಶಾಲೆಯ ಎಲ್ಲಾ ಮಕ್ಕಳಿಗೆ ಹಾಗೂ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಪೋಷಕರಿಗೆ ವಿತರಿಸಿರುವುದು. ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರನ್ನು ಹಾಗೂ ಭಾಗವಹಿಸಿದವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಹುಮಾನಗಳನ್ನು ವಿತರಿಸಿರುವುದು ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.

ಶಾಲಾ ಮಕ್ಕಳ ಪೋಷಕರಿಗಾಗಿ ವಿವಿಧ ಮನೋರಂಜನಾತ್ಮಕ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪೋಷಕರು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ಮಕ್ಕಳೊಂದಿಗೆ ಸಂಭ್ರಮ ಹಂಚಿಕೊಂಡರು. ಪೋಷಕರ ಸ್ಪರ್ಧೆಗಳ ವಿಜೇತರಿಗೂ ಬಹುಮಾನಗಳನ್ನು ವಿತರಿಸಲಾಯಿತು. ಮಕ್ಕಳ ಪ್ರತಿಭಾ ಪ್ರದರ್ಶನದ ಜೊತೆಗೆ ಪೋಷಕರಿಗೂ ಸಂಭ್ರಮಿಸುವ ಅವಕಾಶ ಕಲ್ಪಿಸಿರುವುದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಸಹ ಶಿಕ್ಷಕ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ ಆರ್. ಸ್ವಾಗತಿಸಿದರು. ಹಿರಿಯ ಶಿಕ್ಷಕ ಪಿ. ಶಿವಾನಂದ ಭಂಡಾರಿ ವಂದಿಸಿದರು.

Related posts

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!