November 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಜ್ಞಾನ ವಸ್ತುಪ್ರದರ್ಶನ: ಅನುಗ್ರಹ ಶಾಲೆ ವಿದ್ಯಾರ್ಥಿಯ ಗಮನಾರ್ಹ ಸಾಧನೆ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ನ.17ರಂದು ಬೆಳ್ತಂಗಡಿಯ ಹೋಲಿ ರಿಡೀಮರ್ ಚರ್ಚ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಸ್ತುಪ್ರದರ್ಶನದ ವೈಯಕ್ತಿಕ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶ್ರಮಂತ್ ಪಡಿಲ್ಲಾಯ ದ್ವಿತೀಯ ಬಹುಮಾನವನ್ನು ಪಡೆದು ಶಾಲೆಗೆ ಹೆಮ್ಮೆ ತಂದಿದ್ದಾರೆ.

ಈ ಸಾಧನೆಯ ಮೂಲಕ ಶ್ರಮಂತ್ ಜಿಲ್ಲಾ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದು, ನ.19 ರಂದು ಪುತ್ತೂರಿನ ವಿವೇಕಾನಂದ ಶಾಲೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಸಂಚಾಲಕರು, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya
error: Content is protected !!