ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ನ.17ರಂದು ವೃತ್ತಿ ಮಾರ್ಗದರ್ಶನ ಕಾರ್ಯಗಾರವು ಶಾಲಾ ಸಭಾಂಗಣದಲ್ಲಿ ಜರುಗಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಡಿ.ಎಂ ಕಾಲೇಜು ಉಜಿರೆ ಇಲ್ಲಿಯ ನಿವೃತ್ತ ಪ್ರಾಂಶುಪಾಲರಾದ ರೊ| ಡಾ. ಎ. ಜಯರಾಮ್ ಶೆಟ್ಟಿ, ಇವರು ಆಗಮಿಸಿದ್ದರು. ವಿದ್ಯಾರ್ಥಿಗಳು ಉತ್ತಮ ವೃತ್ತಿ ಯಾಕೆ ಆರಿಸಬೇಕು? ಇದರಿಂದಾಗುವ ಪ್ರಯೋಜನವನ್ನು ತಮ್ಮ ಜೀವನದ ಕೆಲವು ಘಟನೆಗಳನ್ನು ಉದಾಹರಣೆ ನೀಡಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ವೃತ್ತಿ ಆಯ್ಕೆ ಮಾಡಬೇಕು ಎಂದು ತಿಳಿ ಹೇಳಿದರು.

ತದನಂತರ ಡಾ| ನಾಗರಾಜ್‌ರವರು ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗ ದೊರಕಬೇಕಾದರೆ ಯಾವ ವೃತ್ತಿಗೆ ಯಾವ ವಿಷಯ ಆಯ್ಕೆ ಮಾಡಬೇಕು ಎಂಬ ಜ್ಞಾನ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಬೆಳ್ತಂಗಡಿ ವಲಯದ ಅಧ್ಯಕ್ಷರಾದ ರೊ| ಶ್ರೀಧರ್ ಕೆ.ವಿ ಹಾಗೂ ಸಂಯೋಜಕರಾದ ರೊ| ರೊನಾಲ್ಡ್ ಲೋಬೊ ಹಾಜರಿದ್ದರು.
ಶಾಲೆಯ ಮುಖ್ಯೋಪಾದ್ಯಾಯರು, ಶಿಕ್ಷಕರು ಹಾಗೂ 250 ವಿದ್ಯಾರ್ಥಿಗಳು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು.













