ಮಚ್ಚಿನ: ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷೆ ದಿವ್ಯ, ಸಿದ್ಧಪ್ಪ ಗೌಡ, ಡೀಕಯ್ಯ ಗೌಡ, ಸ.ಹಿ.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಶ್ಯಾಮಲಾ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ನಂದಿನಿ, ಪುಟಾಣಿಗಳಾದ ನಿತೇಶ್ ಮತ್ತು ರಿತ್ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಕ್ಕಳು ಪ್ರಾಥ೯ನೆ ಹಾಡಿದರು. ಅಂಗನವಾಡಿ ಕಾರ್ಯಕತೆ೯ ಪುಷ್ಪಾವತಿ ಸ್ವಾಗತಿಸಿದರು. ಮಕ್ಕಳಿಗೆ ಹಾಗು ಮಹಿಳೆಯರಿಗೆ ಬಹುಮಾನ ನೀಡಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಚಂದ್ರಕಾಂತ್ ನಿಡ್ಡಾಜೆ, ದುಗಾ೯ಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷರು ಹಾಗು ಸದಸ್ಯರಿಗೆ, ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಅಂಗನವಾಡಿ ಕಾರ್ಯಕರ್ತೆ ಧನ್ಯವಾದ ಹೇಳಿದರು.













