November 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಲೆಯಲ್ಲಿ ರಾಜಕೀಯ ಭಾಷಣ : ಶಾಸಕ ಹರೀಶ್ ಪೂಂಜ ವಿರುದ್ಧ ಎಸ್ ಡಿಪಿಐ ಠಾಣೆಗೆ ದೂರು

ಬೆಳ್ತಂಗಡಿ : ಶಾಲಾ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿರುವುದನ್ನು ವಿರೋಧಿಸಿ, ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಭಾಷಣ ಮಾಡಿದ ಆರೋಪದ ವಿರುದ್ಧ ಎಸ್ ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದೆ.

ಕ್ಷೇತ್ರ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಶಾಲಾ ಕಾರ್ಯಕ್ರಮದ ವೇದಿಕೆಯನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಂಡಿರುವುದು ಹಾಗೂ ಶಾಲಾ ಮಕ್ಕಳ ಮುಂದೆ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಿರುವುದು ಖಂಡನೀಯ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನ. 14ರಂದು ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಶಾಲಾ ಮಕ್ಕಳ ಸಮೂಹದ ಮುಂದೆ ರಾಜಕೀಯ ಪಕ್ಷದ ವಿಚಾರಧಾರೆ ಹಾಗೂ ರಾಜಕೀಯ ಪಕ್ಷದ ಚಟುವಟಿಕೆಗಳನ್ನು ಪ್ರಸ್ತಾಪಿಸಿರುವುದು ಮಕ್ಕಳಲ್ಲಿ ರಾಜಕೀಯ ಪ್ರಭಾವ ಮೂಡಿಸುವ ಪ್ರಯತ್ನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಶಾಲಾ ಕಾರ್ಯಕ್ರಮಗಳಲ್ಲಿ ರಾಜಕೀಯ ಪ್ರಚಾರ ಹಾಗೂ ಮಕ್ಕಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಪ್ರವೃತ್ತಿಗೆ ಕಡಿವಾಣ ಹಾಕುವಂತೆ ಎಸ್ ಡಿಪಿಐ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಕಣಿಯೂರು ಬ್ಲಾಕ್ ಸಮಿತಿ ಕಾರ್ಯದರ್ಶಿ ಲತೀಫ್ ಪುಂಜಾಲಕಟ್ಟೆ ಹಾಗೂ ಬ್ಲಾಕ್ ಸಮಿತಿ ಸದಸ್ಯರಾದ ರಝಕ್ ಬಳ್ಳಮಂಜ ಉಪಸ್ಥಿತರಿದ್ದರು.

Related posts

ದಿವ್ಯಜ್ಯೋತಿ ಆಂ.ಮಾ. ಶಾಲೆಯಲ್ಲಿ ಜೂನಿಯ‌ರ್ ಜೆಸಿ ಘಟಕದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

Suddi Udaya

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya
error: Content is protected !!