November 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಗಾರ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ನ.17ರಂದು ವೃತ್ತಿ ಮಾರ್ಗದರ್ಶನ ಕಾರ್ಯಗಾರವು ಶಾಲಾ ಸಭಾಂಗಣದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಡಿ.ಎಂ ಕಾಲೇಜು ಉಜಿರೆ ಇಲ್ಲಿಯ ನಿವೃತ್ತ ಪ್ರಾಂಶುಪಾಲರಾದ ರೊ| ಡಾ. ಎ. ಜಯರಾಮ್ ಶೆಟ್ಟಿ, ಇವರು ಆಗಮಿಸಿದ್ದರು. ವಿದ್ಯಾರ್ಥಿಗಳು ಉತ್ತಮ ವೃತ್ತಿ ಯಾಕೆ ಆರಿಸಬೇಕು? ಇದರಿಂದಾಗುವ ಪ್ರಯೋಜನವನ್ನು ತಮ್ಮ ಜೀವನದ ಕೆಲವು ಘಟನೆಗಳನ್ನು ಉದಾಹರಣೆ ನೀಡಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ವೃತ್ತಿ ಆಯ್ಕೆ ಮಾಡಬೇಕು ಎಂದು ತಿಳಿ ಹೇಳಿದರು.

ತದನಂತರ ಡಾ| ನಾಗರಾಜ್‌ರವರು ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗ ದೊರಕಬೇಕಾದರೆ ಯಾವ ವೃತ್ತಿಗೆ ಯಾವ ವಿಷಯ ಆಯ್ಕೆ ಮಾಡಬೇಕು ಎಂಬ ಜ್ಞಾನ ನೀಡಿದರು.

ಕಾರ್ಯಕ್ರಮದಲ್ಲಿ ರೋಟರಿ ಬೆಳ್ತಂಗಡಿ ವಲಯದ ಅಧ್ಯಕ್ಷರಾದ ರೊ| ಶ್ರೀಧರ್ ಕೆ.ವಿ ಹಾಗೂ ಸಂಯೋಜಕರಾದ ರೊ| ರೊನಾಲ್ಡ್ ಲೋಬೊ ಹಾಜರಿದ್ದರು.

ಶಾಲೆಯ ಮುಖ್ಯೋಪಾದ್ಯಾಯರು, ಶಿಕ್ಷಕರು ಹಾಗೂ 250 ವಿದ್ಯಾರ್ಥಿಗಳು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸತತ 6ನೇ ಬಾರಿ ಎಸ್.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಉಜಿರೆ-ಗುರುವಾಯನಕೆರೆಯ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ ಮತ್ತು ಫರ್ನಿಚರ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಸ್ಪೆಷಲ್‌ ಆಫರ್‌

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya
error: Content is protected !!