November 20, 2026
ಆರೋಗ್ಯ

ಬೆಳ್ತಂಗಡಿಯ ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಮತ್ತು ಆಸ್ಪತ್ರೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 34ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ:

ಬೆಳ್ತಂಗಡಿ (ನ. 04): ಸೇವಾಭಾರತಿ(ರಿ.), ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಮತ್ತು ಆಸ್ಪತ್ರೆ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 34ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಸಮಾರಂಭವು ನವೆಂಬರ್ 19 ರಂದು ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಬಿ.ಕೆ. ಪ್ರಶಾಂತ್ ಅವರು ಉದ್ಘಾಟಿಸಿದರು.

ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ| ಪ್ರಸನ್ನ ಕಾಕುಂಜೆ ರವರು ಸೇವಾಧಾಮದ ಸೇವಾ ಕಾರ್ಯಗಳನ್ನು ಶ್ಲಾಘಿಸಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ಸೇವಾಭಾರತಿ ಹಮ್ಮಿಕೊಂಡಿರುವ ಶಿಬಿರಕ್ಕೆ ಶುಭಹಾರೈಸಿದರು.

ಕನ್ಯಾಡಿ ಸೇವಾಭಾರತಿಯ ಅಧ್ಯಕ್ಷರು ಹಾಗೂ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಸಂಸ್ಥೆಯು ನಡೆಸಿಕೊಂಡು ಬರುತ್ತಿರುವ ವಿವಿಧ ಸೇವಾ ಕಾರ್ಯಗಳ ಕುರಿತು ಮಾಹಿತಿ ಹಂಚಿಕೊಂಡರು. ಪ್ರಸನ್ನ ಆಯುರ್ವೇದ ಕಾಲೇಜಿನಲ್ಲಿ ಎರಡನೇ ಬಾರಿಗೆ ಉಚಿತ ಶಿಬಿರವನ್ನು ಆಯೋಜಿಸಲು ಸಹಕಾರ ನೀಡಿದ ಕಾಲೇಜಿನ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೆ, ಸಂಸ್ಥೆಯ ಸೇವಾ ಕಾರ್ಯಗಳಿಗೆ ಕೈಜೋಡಿಸಿ ನೀಡುತ್ತಿರುವ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿ ಅಧ್ಯಕ್ಷರ ಮಾತುಗಳನ್ನಾಡಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ರೊ| ಶ್ರೀಧರ್ ಕೆ. ವಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ರಘುರಾಮ ಶೆಟ್ಟಿ ”ಸಾಧನಾ” ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ 10 ಮಂದಿ ದಿವ್ಯಾಂಗರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಸೇವಾಭಾರತಿಯ ಸಕ್ಸಸ್ಸರ್ ಡೆಸಿಗ್ನೆಟ್ ಶ್ರೀ ಮೋಹನ್ ಎಸ್ ರವರು ಸ್ವಾಗತಿಸಿ, ಸೇವಾಭಾರತಿ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ ರವರು ಕಾರ್ಯಕ್ರಮವನ್ನು ನಿರೂಪಿಸಿದರು, ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಶ್ರೀ ಧನೇಂದ್ರ ರವರು ಧನ್ಯವಾದವಿತ್ತರು.

Related posts

ಬೆನ್ನುಹುರಿಯ ದ್ರವ ತುಂಬಿದ ಚೀಲಗಳ ಎಂಡೋಸ್ಕೋಪಿಕ್ ಸರ್ಜರಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೊಂದು ಅಪರೂಪದ ಶಸ್ತ್ರಚಿಕಿತ್ಸೆ

Suddi Udaya

ಕಳಿಯ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!