November 20, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪಿಯು ಕಾಲೇಜಿನಲ್ಲಿ ‘ಅಭಿನಂದನಂ 2026 ’ – ವಿದ್ಯಾರ್ಥಿಗಳ ಸಾಧನೆಗೆ ಗೌರವದ ಮನ್ನಣೆ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ, ತರಗತಿವಾರು ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ‘ಅಭಿನಂದನಂ 2026’ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಜಯಾನಂದ ಗೌಡ ಪ್ರಜ್ವಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಳೆಕೋಟೆಯ ವಿನಾಯಕ ರೈಸ್ ಮಿಲ್‌ನ ಮಾಲಕ ಶ್ರೀಕಾಂತ್ ಕಾಮತ್ ಹಾಗೂ ಕಿಟ್ಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜು, ಮಂಗಳೂರಿನ ಪ್ರಾಂಶುಪಾಲ ವಿಠಲ ಎ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಹಾಗೂ ಮುಖ್ಯ ಅತಿಥಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ, ಪರಿಶ್ರಮ, ಶಿಸ್ತು ಮತ್ತು ಸಾಧನೆಯ ಮಹತ್ವವನ್ನು ತಿಳಿಸಿ, ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿದರು. ವಾಣಿ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಉಪನ್ಯಾಸಕ ಮಹಾಬಲ ಗೌಡ, ಉಪನ್ಯಾಸಕಿ ದೀಕ್ಷಾ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಅಕ್ಷತ್ ಕೆ. ವಾಚಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಬೆಳ್ಳಿಯಪ್ಪ ಕೆ. ಮತ್ತು ಶೃತಿ ನಿರೂಪಿಸಿದರು. ಉಪನ್ಯಾಸಕ ಶಂಕರ್ ರಾವ್ ವಂದನಾರ್ಪಣೆಗೈದರು.

Related posts

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!