November 20, 2026
ಜಿಲ್ಲಾ ಸುದ್ದಿ

ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಮಂಗಳೂರು.ನ.19: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನಡುವಿನ ಸಂಪರ್ಕ ಕೊಂಡಿಯಾಗಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಯು ಈ ಭಾಗದ ಜನರ ಬಹುದಶಕಗಳ ಬೇಡಿಕೆಯಾಗಿದೆ. ಹಿಂದಿನ ಕಾಲದಲ್ಲಿ ವಾಹನ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿದ್ದ ಈ ರಸ್ತೆಯ ಪುನರುಜ್ಜೀವನಕ್ಕಾಗಿ ಸ್ಥಳೀಯರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ರಸ್ತೆ ಸಂಪರ್ಕ ಪುನಃ ಕಲ್ಪಿಸುವುದರಿಂದ ಎರಡೂ ಜಿಲ್ಲೆಗಳ ಗ್ರಾಮೀಣ ಭಾಗದ ಜನರಿಗೆ ಸಂಚಾರ, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಹಿನ್ನೆಲೆಯಲ್ಲಿ ರಸ್ತೆ ಸಂಪರ್ಕದ ಬೇಡಿಕೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜ ಅವರು ವಿಶೇಷ ಮುತುವರ್ಜಿ ವಹಿಸಿದ್ದಾರೆ. ಇತ್ತೀಚೆಗೆ ನಡೆದ ಹಕ್ಕೊತ್ತಾಯ ಸಮಾವೇಶದಲ್ಲಿ ಭಾಗವಹಿಸಿದ್ದ ಶಾಸಕರು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ರಸ್ತೆ ಸಂಪರ್ಕದ ಸಾಧ್ಯತೆಗಳ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸುವ ಭರವಸೆ ನೀಡಿದ್ದರು. ಅದರಂತೆ ಪ್ರಸ್ತಾವಿತ ರಸ್ತೆ ಮಾರ್ಗದ ಸ್ಥಳ ಪರಿಶೀಲನೆಯನ್ನೂ ನಡೆಸಲಾಗಿತ್ತು.

ಇದರ ಮುಂದುವರಿದ ಭಾಗವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಸ್ತಾವಿತ ರಸ್ತೆ ಮಾರ್ಗದ ತಾಂತ್ರಿಕ ಸಾಧ್ಯತೆಗಳು, ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದ ನಿಯಮಗಳು, ಅಗತ್ಯ ಅನುಮತಿಗಳು, ಭೂಮಿಯ ಸ್ವರೂಪ ಹಾಗೂ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ತಾಂತ್ರಿಕ ಅಂಶಗಳ ಕುರಿತು ಚರ್ಚಿಸಲಾಯಿತು.

ಅಲ್ಲದೆ, ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸಲು ಕೈಗೊಳ್ಳಬೇಕಾದ ಸ್ಥಳ ಪರಿಶೀಲನೆ, ಅಗತ್ಯ ದಾಖಲೆಗಳ ಸಂಗ್ರಹ, ಇಲಾಖಾವಾರು ಜವಾಬ್ದಾರಿಗಳು ಹಾಗೂ ವರದಿ ಸಿದ್ಧಪಡಿಸುವ ಕಾಲಮಿತಿಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಶಿಶಿಲ–ಬೈರಾಪುರ ರಸ್ತೆ ಸಂಪರ್ಕದ ದಶಕಗಳ ಬೇಡಿಕೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಗ್ರ ಯೋಜನಾ ವರದಿ ಸಿದ್ಧಪಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಮುಂದಿನ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.

Related posts

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ ಶಾಸಕ ಹರೀಶ್ ಪೂಂಜ ಖಂಡನೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya
error: Content is protected !!