November 21, 2026
ಗ್ರಾಮಾಂತರ ಸುದ್ದಿನಿಧನವರದಿ

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಾಲುನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆ ನಿನ್ನಿಕಲ್ಲು ಸಮೀಪದ ಮಣಿಕೆ ಎಂಬಲ್ಲಿ ಶುಕ್ರವಾರ ನಡೆದಿದೆ.

ಚಾರ್ಮಾಡಿ ನಿವಾಸಿ ಸುಂದರ (55) ಮೃತಪಟ್ಟವರು. ಅವರು ಉಜಿರೆಯಲ್ಲಿರುವ ತಮ್ಮ ಮೂಲ ಮನೆಯ ಹಿಂಭಾಗದಲ್ಲಿರುವ ಕೊಟ್ಟಿಗೆಯ ಚಾವಣಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುಂದರ ಅವರು ಕೂಲಿ ಕಾರ್ಮಿಕರಾಗಿದ್ದು, ಕಳೆದ ಹಲವು ಸಮಯಗಳಿಂದ ಕಾಲುನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ಅವರು ಉಜಿರೆಯ ಮಣಿಕೆಯಲ್ಲಿರುವ ತಮ್ಮ ಮೂಲ ಮನೆಗೆ ಬಂದಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.ಮೃತರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಣಕಜೆ: ಟೆಂಪೋ ಮತ್ತು ಬೈಕ್ ನಡುವೆ ಅಪಘಾತ

Suddi Udaya
error: Content is protected !!