ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಗೌಡೆರೆ ಗೌಜಿ ಗಮ್ಮತ್ ತುಳು ಸಾಂಸ್ಕೃತಿಕ ಪರ್ಬ -2026 ರ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಈ ಸಂಧರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕಾನೂನು ಸಲಹೆಗಾರಾದ ನವೀನ್ ಬಿ ಕೆ, ಯುವ ವೇದಿಕೆಯ ಉಪಾಧ್ಯಕ್ಷ ನಿತಿನ್ ಕಲ್ಮಂಜ, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ನಿರ್ದೇಶಕ ಗಣೇಶ್ ಕಳಾಯಿ ಉಪಸ್ಥಿತರಿದ್ದರು.













