November 21, 2026
ಆಯ್ಕೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಐಸಿಎಂಆರ್–SHINE ರಾಷ್ಟ್ರಮಟ್ಟದ ಸ್ಪರ್ಧೆಗೆ ಎಕ್ಸಲೆಂಟ್ ಶಾಲೆಯ ಜನನಿ ಆಯ್ಕೆ

ಮೂಡುಬಿದಿರೆ: ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜನನಿ
ಕೆ. ಅವರು ಪ್ರತಿಷ್ಠಿತ ಐಸಿಎಂಆರ್–SHINE (ICMR-SHINE) ರಾಷ್ಟ್ರಮಟ್ಟದ ಸ್ಪರ್ಧೆ–2026 ಕ್ಕೆ
ಆಯ್ಕೆಯಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ದೇಶದಾದ್ಯಂತ ಸುಮಾರು 30,000 ಸ್ಪರ್ಧಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ
ಆಯ್ಕೆಯಾದ 100 ಸ್ಪರ್ಧಿಗಳಲ್ಲಿ ಜನನಿ ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ, ಕರ್ನಾಟಕ ರಾಜ್ಯದಿಂದ
ಆಯ್ಕೆಯಾದ ಕೇವಲ ಆರು ಸ್ಪರ್ಧಿಗಳಲ್ಲಿ ಜನನಿ ಕೂಡ ಒಬ್ಬರಾಗಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council of Medical Research – ICMR)
ಆಯೋಜಿಸುವ ಈ ಸ್ಪರ್ಧೆಯು ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಸಂಶೋಧನಾ ಮನೋಭಾವ
ಹಾಗೂ ನಾವೀನ್ಯತೆಯ ಚಿಂತನೆಯನ್ನು ಬೆಳೆಸುವ ಉದ್ದೇಶ ಹೊಂದಿದೆ. ಸಮಾಜದ ನೈಜ ಸಾರ್ವಜನಿಕ
ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರಗಳನ್ನು ಸೂಚಿಸುವ ಮೂಲಕ
ವಿದ್ಯಾರ್ಥಿಗಳಲ್ಲಿನ ವೈಜ್ಞಾನಿಕ ಪ್ರತಿಭೆಯನ್ನು ಪ್ರೋತ್ಸಾಹಿಸುವುದು ಈ ಸ್ಪರ್ಧೆಯ ಪ್ರಮುಖ ಆಶಯವಾಗಿದೆ.
ಜನನಿ ಅವರ ಈ ಗಮನಾರ್ಹ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್
ಕಾರ್ಯದರ್ಶಿ ರಶ್ಮಿತಾ ಜೈನ್ , ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ
ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

Related posts

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಉಜಿರೆ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya
error: Content is protected !!