ಕೊಕ್ಕಡ: ಪಟ್ರಮೆ ಗ್ರಾಮದ ಪೆರ್ಮುಡದಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ತಮ್ಮ ಮನೆ ಸಮೀಪ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.18 ರಂದು ನಡೆದಿದೆ.
ಮೃತರು ಮೂಲತಃ ಕೌಕ್ರಾಡಿ ಗ್ರಾಮದವರಾಗಿದ್ದು ಪ್ರಸ್ತುತ ಪೆರ್ಮುಡದಲ್ಲಿ ವಾಸವಾಗಿದ್ದ ಗೀತಾ (42) ಎಂದು ಗುರುತಿಸಲಾಗಿದೆ.
ಮೃತರಿಗೆ ಐವರು ಪುತ್ರರಿದ್ದಾರೆ. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.













