November 21, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ-ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ಪ್ರತಿಭಟನೆ-ಕಾಲ್ನಡಿಗೆ ಜಾಥಾ

ಬಂದಾರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ಬೃಹತ್ ಪ್ರತಿಭಟನೆ ನ.20 ರಂದು ಬಂದಾರು ಮುಖ್ಯ ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಬಿಜೆಪಿ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ಸರ್ಕಾರದ ಆಡಳಿತ ವಿರೋಧಿ ನೀತಿಗಳ ವಿರುದ್ಧ ಕಿಡಿಕಾರಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಮನ್ ಕೀ ಬಾತ್ ಸಂಚಾಲಕ ಸೀತಾರಾಮ್ ಬೆಳಾಲು ನೆರೆದ ಗ್ರಾಮಸ್ಥರನ್ನು ಉದ್ದೇಶಿಸಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ನೀತಿಗಳ ವಿರುದ್ಧ ವಿವರಿಸಿದರು.

ವೇದಿಕೆಯಲ್ಲಿ ಬಂದಾರು ಪಂಚಾಯತ್ ಪ್ರಭಾರಿ ಯುವ ವಕೀಲ ಯತೀಶ್ ಶೆಟ್ಟಿ ಪಣೆಕ್ಕರ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಹಾಬಲ ಗೌಡ ನಾಗದೋಂಡಿ ಪೆರ್ಲ-ಬೈಪಾಡಿ, ಕಣಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಡಿ.ಕೆ ಕಡಮ್ಮಾಜೆ ಫಾರ್ಮ್ಸ್, ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪ್ರಮುಖರಾದ ದಿನೇಶ್ ಗೌಡ ಖಂಡಿಗ, ಗಂಗಾಧರ ಪೂಜಾರಿ ದಂಬೆತ್ತಿಮಾರು ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿಯ ಹಲವು ಪ್ರಮುಖರು, ಜನಪ್ರತಿನಿದಿನಗಳು ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರು, ಯುವ ವಕೀಲ ಉದಯ್ ಕುಮಾರ್ ಬಿ. ಕೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!