November 21, 2026
Uncategorizedಅಭಿನಂದನೆಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಿನಿ ಒಲಿಂಪಿಕ್ಸ್ ಕಬಡ್ಡಿಯಲ್ಲಿ ದಕ್ಷಿಣ ಕನ್ನಡ ತಂಡಕ್ಕೆ ರನ್ನರ್ ಅಪ್ ಪ್ರಶಸ್ತಿ – ತಂಡವನ್ನು ಪ್ರತಿನಿಧಿಸಿದ ಬೆಳ್ತಂಗಡಿಯ ಸಾತ್ವಿಕ್ ಆಚಾರ್ಯ

ಬೆಳ್ತಂಗಡಿ: ಬೆಂಗಳೂರಿನ ಪ್ರತಿಷ್ಠಿತ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಈ ತಂಡವನ್ನು ಪ್ರತಿನಿಧಿಸಿ ತನ್ನ ಕ್ರೀಡಾ ಕೌಶಲ್ಯ, ಚುರುಕುತನ ಹಾಗೂ ಅದ್ಭುತ ಆಟದ ಮೂಲಕ ಗಮನ ಸೆಳೆದ ಬೆಳ್ತಂಗಡಿ ತಾಲೂಕಿನ ಕೊಡಂಗೆ ನಿವಾಸಿಗಳಾದ ಶ್ರೀ ಪ್ರಭಾಕರ ಆಚಾರ್ಯ ಮತ್ತು ಶ್ರೀಮತಿ ಜಯಲಕ್ಷ್ಮಿ ದಂಪತಿಯ ಪುತ್ರ ಮಾಸ್ಟರ್ ಸಾತ್ವಿಕ್ ಆಚಾರ್ಯ ವಿಶೇಷ ಅಭಿನಂದನೆಗೆ ಪಾತ್ರರಾಗಿದ್ದಾರೆ.

ಪ್ರಸ್ತುತ ಬಡಕಾರಂದೂರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾತ್ವಿಕ್, ಚಿಕ್ಕ ವಯಸ್ಸಿನಲ್ಲಿಯೇ ಕಬಡ್ಡಿ ಕ್ರೀಡೆಯಲ್ಲಿ ತೋರಿದ ಆಸಕ್ತಿ ಮತ್ತು ಪ್ರತಿಭೆಯನ್ನು ಗುರುತಿಸಿದ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡುವ ಮೂಲಕ ಅವರ ಕ್ರೀಡಾ ಪ್ರತಿಭೆಗೆ ಉತ್ತಮ ವೇದಿಕೆಯನ್ನು ಒದಗಿಸಿದೆ. ಸಂಘಟನೆಯ ಪ್ರೋತ್ಸಾಹ, ತರಬೇತುದಾರರ ಮಾರ್ಗದರ್ಶನ ಹಾಗೂ ಸಾತ್ವಿಕ್ ಅವರ ನಿರಂತರ ಪರಿಶ್ರಮದ ಫಲವಾಗಿ ಅವರು ಜಿಲ್ಲಾ ತಂಡದಲ್ಲಿ ಸ್ಥಾನ ಪಡೆದು ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ.

ರಾಜ್ಯಮಟ್ಟದ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ರನ್ನರ್ ಅಪ್ ಪ್ರಶಸ್ತಿ ಗಳಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವುದು ಅವರ ಕ್ರೀಡಾ ಬದುಕಿನ ಹೆಮ್ಮೆಯ ಸಾಧನೆಯಾಗಿದೆ. ಈ ಮೂಲಕ ತಮ್ಮ ಶಾಲೆ, ಕುಟುಂಬ ಹಾಗೂ ಬೆಳ್ತಂಗಡಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಸಾತ್ವಿಕ್ ಅವರ ಸಾಧನೆಗೆ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಪೋಷಕರು, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ತರಬೇತುದಾರರು ಹಾಗೂ ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya
error: Content is protected !!