November 22, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಕೋ-ಆಪರೇಟಿವ್ ಸೊಸೈಟಿಗೆ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಸಾಧನೆಯನ್ನು ಪುರಸ್ಕರಿಸಿ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಸಹಕಾರಿ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ನ.20ರಂದು ನಡೆದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ರಾಜ್ಯಮಟ್ಟದ ಸಮಾರೋಪ ಸಮಾರಂಭದಲ್ಲಿ ಪ್ರತಿಷ್ಠಿತ ‘ಸಹಕಾರಿ ಮಾಣಿಕ್ಯ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸೊಸೈಟಿಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಪ್ರಶಸ್ತಿ ಸ್ವೀಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಪ್ರಶಸ್ತಿ ಪ್ರದಾನ ಮಾಡಿದರು.

ಸಹಕಾರ ಸಚಿವ ಲಕ್ಷ್ಮಣ ಸವದಿ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ. ಟಿ ದೇವೇಗೌಡ, ಎಸ್‌ಸಿಡಿಸಿಸಿ ನಿರ್ದೇಶಕ, ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾ‌ರ್ ರೈ ಬಾಲ್ಯೊಟ್ಟು, ಸಂಸದರಾದ ಕ್ಯಾ। ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಯಶ್ ಪಾಲ್ ಸುವರ್ಣ, ಐವನ್ ಡಿ’ಸೋಜಾ ಉಪಸ್ಥಿತರಿದ್ದರು.

Related posts

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಜೂ.4: ವಿದ್ಯುತ್ ನಿಲುಗಡೆ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!