November 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸವಣಾಲು ಶಾಖೆಯ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸವಣಾಲು ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ನ.21 ಶನಿವಾರದಂದು ಸವಣಾಲಿನಲ್ಲಿ ಅದ್ದೂರಿಯಾಗಿ ನಡೆಯಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಕುಶಾಲಪ್ಪ ಗೌಡ ಪೂವಾಜೆ (ನಿರ್ದೇಶಕರು, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಮಂಗಳೂರು) ಅವರು ನಾಮಫಲಕವನ್ನು ಅನಾವರಣಗೊಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ಆರಿಗ ಅವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎಂ. ಗಣೇಶ್ ಭಟ್ (ಪ್ರಗತಿಪರ ಕೃಷಿಕರು, ಮಜಲು ಮನೆ, ಸವಣಾಲು) ಗೋಪಾಲಗೌಡ (ಕೃಷಿಕರು, ಕೃಪಾಕಿರಣ ಪೊಂಗರೆಕಾಡು, ಸವಣಾಲು) ಎಸ್. ಎಮ್. ರಘು (ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಪುತ್ತೂರು ಉಪವಿಭಾಗ) ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಸವಣಾಲು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಬೆಳ್ತಂಗಡಿ ಸಹಕಾರಿ ಸಂಘದ ವತಿಯಿಂದ ರೂ.50 ಸಾವಿರವನ್ನು ಸಂಘ ಅಧ್ಯಕ್ಷ ದಿನೇಶ್ ಶೆಟ್ಟಿ ಅವರಿಗೆ ಶಾಸಕರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸವಣಾಲು ಶಾಖಾ ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗಾ ಹಾಗೂ ಉಪಾಧ್ಯಕ್ಷ ಗಣೇಶ್ ಭಂಡಾರಿ ಅವರನ್ನು ಗ್ರಾಮಸ್ಥರ ವತಿಯಿಂದ ಗೌರವಿಸಲಾಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಗಣೇಶ್ ಭಂಡಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್., ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರೇಮಾ ನಿರ್ದೇಶಕರು ಇವರ ಪ್ರಾಥ೯ನೆ ಬಳಿಕ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಸ್ವಾಗತಿಸಿದರು. ಮನೋಹರ ಪ್ರಸಾದ್ ಶಿಲಾ೯ಲು ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಗಣೇಶ್ ಭಂಡಾರಿ ವಂದಿಸಿದರು.

Related posts

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya
error: Content is protected !!