November 22, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಗುರುವಾಯನಕೆರೆಯಲ್ಲಿ ಯತೀಶ್ ಗೌಡ ಕೊಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಕಳೆದ ಜೂನ್ 1ರಂದು ನಡೆದಿದ್ದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಉಳಿದಿಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ. ಕೆಲವೇ ದಿನಗಳ ಹಿಂದಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯದಿಂದ ಜಾಮೀನು ಲಭಿಸಿತ್ತು.

ಪ್ರಕರಣದ ಹಿನ್ನೆಲೆ: ಜೂನ್ 1ರಂದು ಬೆಳಗ್ಗೆ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿತ್ತು. ಬಳಿಕ ಮೃತ ವ್ಯಕ್ತಿ ಪೆರ್ನೆಯ ಯತೀಶ್ ಗೌಡ ಎಂಬುದು ದೃಢಪಟ್ಟಿದ್ದು, ಅವರ ಸಹೋದರ ನಿತಿನ್ ಮತ್ತು ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆ ಮಾಡಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಮೂವರು ಆರೋಪಿಗಳಿಗೂ ಜಾಮೀನು ಮಂಜೂರಾದಂತಾಗಿದೆ.

Related posts

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್‌ಡಿಪಿಐ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya
error: Content is protected !!