ಕೊಕ್ಕಡ: `ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ-ಬೃಹತ್ ಜನಾಂದೋಲನ ಸಭೆ ನ.21ರಂದು ನಡೆಯಿತು.
ಗ್ರಾ.ಪಂ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ ಪ್ರ‍್ರಾಸ್ತಾವಿಕ ಮಾತನಾಡಿದರು.

ಶಾಸಕ ಹರೀಶ್ ಪೂಂಜ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಮಾತನಾಡಿದರು.
ವೇದಿಕೆಯಲ್ಲಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭಾಕರ ಗೌಡ, ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್, ಮಾಜಿ ಸದಸ್ಯ ಜಗದೀಶ್ ಕೆಂಪಕೋಡಿ, ಗ್ರಾ.ಪಂ. ಮಾಜಿ ಸದಸ್ಯರು, ಕೊಕ್ಕಡ ಸಹಕಾರಿ ಸಂಘದ ನಿರ್ದೇಶಕರುಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.














