ಬೆಳ್ತಂಗಡಿ: 73 ನೇ ಸಹಕಾರ ಸಪ್ತಾಹ 2026 ರ ಸಹಕಾರ ಸಪ್ತಾಹದಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಅವರು ಸ್ವೀಕರಿಸಿದರು.
ಸಮಾರಂಭದಲ್ಲಿ ಮಾನ್ಯ ಸಹಕಾರ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಫರೀದ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು ಇದರ ಅಧ್ಯಕ್ಷರಾದ ಜಿ ಟಿ ದೇವೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಉಪಸ್ಥಿರಿದ್ದರು.













