ಬೆಳ್ತಂಗಡಿ: ರೂ.50 ಲಕ್ಷ ವೆಚ್ಚದಲ್ಲಿ ಕೊಕ್ರಾಡಿ – ಕುತ್ಲೂರು ಸಂಪರ್ಕ ರಸ್ತೆಯ ಅತ್ರಿಜಾಲು ಎಂಬಲ್ಲಿ ಸೇತುವೆ ಮತ್ತು ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕರಾದ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ನಾರಾವಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಕೊಕ್ರಾಡಿ ಶಕ್ತಿಕೇಂದ್ರ ಅಧ್ಯಕ್ಷರಾದ ಜಗದೀಶ್ ಹೆಗ್ಡೆ, ಮಾಜಿ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು













