November 23, 2026
ಪ್ರಮುಖ ಸುದ್ದಿ

ಚಾರ್ಮಾಡಿ ಘಾಟ್‌ನಲ್ಲಿ ಭೀಕರ ಅಪಘಾತ: ಬಸ್ ಚಕ್ರ ಹರಿದು ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ


ಬೆಳ್ತಂಗಡಿ:ವ್ಯೂ ಪಾಯಿಂಟ್ ವೀಕ್ಷಿಸಲು ಬೆಂಗಳೂರಿನಿಂದ ಬಂದಿದ್ದ ಯುವಕರು; ಬೈಕ್‌ನಿಂದ ರಸ್ತೆಗೆ ಬಿದ್ದ ಹಿಂಬದಿ ಸವಾರನ ಮೇಲೆ ಬಸ್ ಹರಿದು ದುರಂತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್‌ನ ಅಲೆಖಾನ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ 24 ವರ್ಷದ ಯುವಕ ಚಿರಾಗ್ ಮೃತಪಟ್ಟಿದ್ದಾನೆ. ಇನ್ನೊರ್ವ ಯಶಸ್ ಪ್ರಾಣಪಾಯದಿಂದ ಪಾರು, ಇಬ್ಬರು ಕಾಲೇಜಿನ ಸ್ನೇಹಿತರು.
ಬೆಂಗಳೂರಿನಿಂದ ಚಾರ್ಮಾಡಿ ಘಾಟ್‌ನ ಪ್ರಕೃತಿ ಸೌಂದರ್ಯ ಹಾಗೂ ವ್ಯೂ ಪಾಯಿಂಟ್ ವೀಕ್ಷಿಸಲು ಬಂದಿದ್ದ ಇಬ್ಬರು ಯುವಕರು ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ ಬೈಕ್ ಚಾರ್ಮಾಡಿ ಘಾಟ್‌ನ ತಡೆಗೋಡೆಗೆ ತಾಗಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನ ಹಿಂಬದಿ ಕುಳಿತಿದ್ದ ಯುವಕ ರಸ್ತೆಗೆ ಎಸೆಯಲ್ಪಟ್ಟು ಬಿದ್ದಿದ್ದಾನೆ.


ಇದೇ ಸಂದರ್ಭದಲ್ಲಿ ಕಡೂರಿನಿಂದ ಧರ್ಮಸ್ಥಳದ ಚಲಿಸುತಿದ್ದ ಬಸ್‌ನ ಹಿಂಬದಿ ಚಕ್ರ ರಸ್ತೆಗೆ ಬಿದ್ದಿದ್ದ ಯುವಕನ ತಲೆಯ ಮೇಲೆ ಹರಿದಿದೆ. ಪರಿಣಾಮ ಹೆಲ್ಮೆಟ್ ಸಮೇತ ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!