ಉಜಿರೆ: ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನ.25ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ 24 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಜರುಗಲಿದೆ.
ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಶಿಕ್ಷಕರು ಹಾಗೂ ರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕೆ. ಉಪನ್ಯಾಸ ನೀಡಲಿದ್ದಾರೆ. ಸುಮಾರು 45 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಗುವುದೆಂದು ಕಾಲೇಜಿನ ಪ್ರಿನ್ಸಿಪಾಲ್ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.













