ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಯಾದ ಡಾ. ಚಂದ್ರಾವತಿ ಅವರು ನ. 23ರಂದು ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರೊ. ರೊನಾಲ್ಡ್ ಕೊರಯ ಅವರು ಅಧಿಕಾರ ಹಸ್ತಾಂತರಿಸಿದರು.

ಡಾ. ಚಂದ್ರಾವತಿ ಅವರು ಈ ಹಿಂದೆ ಕಾರ್ಕಳದ ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಹಾಗೂ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೆ, ವಾಮದಪದವು ಮತ್ತು ಸಿದ್ದಕಟ್ಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿಯೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಇದೀಗ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿರುವ ಅವರಿಗೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.
ಇವರು ಮೇಲಂತಬೆಟ್ಟು ನಿವಾಸಿ ಸುದೀಪ್ ರಾಜ್ ಅವರ ಧರ್ಮ ಪತ್ನಿ













