November 23, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ:ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವ 2026ರ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಅಳದಂಗಡಿ ಬಡಗಕಾರಂದೂರು ಶಾಲೆಯಲ್ಲಿ ನ 22ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ಅವರು ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಇದೊಂದು ಮೆಚ್ಚುವ ಕೆಲಸ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್ ಕೆ.,ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ,ತಣ್ಣೀರುಪಂಥ ಸಿಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು, ಪ್ರಮುಖರಾದ ರತ್ನರಾಜ್ ಜೈನ್,ಶಶಿಕಾಂತ ನಾಯಕ್,ಡಾ. ಹರಿಪ್ರಸಾದ್ ಸುವರ್ಣ ಹಾಗೂ ಡಾ. ಸುಶ್ಮಾ ಡೋಂಗ್ರೆ ಭಾಗವಹಿಸಿದರು.ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ,ಸಿಇಓ ಮೀರಾ,ನಿರ್ದೇಶಕರಾದ ಗುರು ಪ್ರಸಾದ್ ಹೆಗ್ಡೆ,ವಿಶ್ವನಾಥ ಹೊಳ್ಳ,ಹೇಮಂತ್, ಕೊರಗಪ್ಪ,ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿಕೆ,ದೇಜಪ್ಪ ಪೂಜಾರಿ,ಧರ್ಣಪ್ಪ,ಸುಂದರಿ,ಮಮತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಅನೇಕ ಸಾಧಕರನ್ನು ಸನ್ಮಾನಿಸಲಾಯಿತು.

Related posts

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya
error: Content is protected !!