November 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಸೇವಾ ಕಾರ್ಯಕ್ರಮ

ಉಜಿರೆ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ನವೆಂಬರ್ 24 ರಿಂದ 26ರವರೆಗೆ ವಿವಿಧ ಸಮಾಜಮುಖಿ ಸರಣಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನವೆಂಬರ್ 24ರಂದು ದಯಾ ವಿಶೇಷ ಶಾಲೆ ಲಾಯಿಲ ಇಲ್ಲಿಗೆ ಭೇಟಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ನವೆಂಬರ್ 25ರಂದು ಸ್ವಚ್ಛ ಉಜಿರೆ–ಸ್ವಸ್ಥ ಉಜಿರೆ ಅಭಿಯಾನ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಗೀತೆ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ್ 26ರಂದು ಸಂಚಾರಿ ನಿಯಮಗಳ ಕುರಿತು ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ, ಪರಿಸರ ಕಾಳಜಿ, ಆರೋಗ್ಯ ಜಾಗೃತಿ ಹಾಗೂ ಶಿಸ್ತು ಮತ್ತು ಸಂಚಾರ ನಿಯಮಗಳ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸರಣಿ ಸೇವಾ ಕಾರ್ಯಕ್ರಮಗಳಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya
error: Content is protected !!