November 23, 2026
Uncategorized

ನ.29 ರಂದು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ‘10 PLUS’ ವಿಶೇಷ ಕಾರ್ಯಾಗಾರ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಪರೀಕ್ಷಾ ಸಿದ್ಧತೆ, ಭವಿಷ್ಯದ ಶೈಕ್ಷಣಿಕ ಆಯ್ಕೆಗಳ ಕುರಿತು ಮಾರ್ಗದರ್ಶನ: ಹೆಚ್ಚಿನ ಮಾಹಿತಿಗಾಗಿ: 8618286425 / 6364156449 ಈ ನಂಬರ್ ಸಂಪರ್ಕಿಸಬಹುದಾಗಿದೆ.: ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

ಬೆಳ್ತಂಗಡಿ: ಗುರುವಾರನಕೆರೆಯ ಎಕ್ಸೆಲ್ ಪಿಯು ಕಾಲೇಜಿನ ವತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪಾಲಕರಿಗಾಗಿ ‘10 PLUS’ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ನವೆಂಬರ್ 29ರ ಭಾನುವಾರ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

10ನೇ ತರಗತಿಯ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ, ಆತ್ಮವಿಶ್ವಾಸ ವೃದ್ಧಿ, ಉತ್ತಮ ಅಂಕಗಳಿಕೆಯ ತಂತ್ರಗಳು ಹಾಗೂ ಮುಂದಿನ ಶೈಕ್ಷಣಿಕ ಆಯ್ಕೆಗಳ ಕುರಿತು ಸಮಗ್ರ ಮಾಹಿತಿ ಮತ್ತು ಮಾರ್ಗದರ್ಶನ ನೀಡುವುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ.ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಕಾರ್ಯಾಗಾರ ನಡೆಯಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಪೂರಕವಾಗುವಂತೆ ವಿವಿಧ ಕ್ಷೇತ್ರಗಳ ಅನುಭವಿ ಸಂಪನ್ಮೂಲ ವ್ಯಕ್ತಿಗಳು ವಿಶೇಷ ಉಪನ್ಯಾಸ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರೊ. ಬಿ.ವಿ. ಸೂರ್ಯನಾರಾಯಣ, ಸ್ಮಿತೇಶ್ ಎಸ್ ಬಾರ್ಯ ಹಾಗೂ ಶ್ರೀಮತಿ ಚೈತ್ರ ಎಸ್. ಪೈ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಇದರೊಂದಿಗೆ ಡಾ. ನವೀನ್ ಕುಮಾರ್ ಮರಿಕೆ ಹಾಗೂ ಡಾ. ಪ್ರಜ್ವಲ್ ಕಜೆ ಅವರು ಶೈಕ್ಷಣಿಕ ಮಾರ್ಗದರ್ಶನ ನೀಡಲಿದ್ದಾರೆ.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ NEET, NDA, JEE-IIT ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಚಯ, ಪರೀಕ್ಷಾ ಪೂರ್ವ ತಯಾರಿ, ಸಮಯ ನಿರ್ವಹಣೆ, ಪ್ರಶ್ನೆಪತ್ರಿಕೆ ಬಿಡಿಸುವ ತಂತ್ರಗಳು ಹಾಗೂ ಮುಂದಿನ ವಿದ್ಯಾಭ್ಯಾಸದ ಆಯ್ಕೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಪಾಲಕರಿಗೂ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಂಬಂಧಿಸಿದಂತೆ ಉಪಯುಕ್ತ ಮಾರ್ಗದರ್ಶನ ದೊರೆಯಲಿದೆ.

ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ. ಅವರು ಅಧ್ಯಕ್ಚತೆಯನ್ನು ವಹಿಸಲಿದ್ದಾರೆ.ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.ವಿದ್ಯಾರ್ಥಿಗಳ ಭವಿಷ್ಯದ ಶೈಕ್ಷಣಿಕ ಪಯಣಕ್ಕೆ ಸ್ಪಷ್ಟ ದಿಕ್ಕು ನೀಡುವ ಉದ್ದೇಶದಿಂದ ರೂಪಿಸಿರುವ ಈ ಕಾರ್ಯಾಗಾರದ ಪ್ರಯೋಜನವನ್ನು 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪಾಲಕರು ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.ಹೆಚ್ಚಿನ ಮಾಹಿತಿಗಾಗಿ: 8618286425 / 6364156449 ಈ ನಂಬರ್ ಸಂಪರ್ಕಿಸಬಹುದಾಗಿದೆ.

Related posts

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya
error: Content is protected !!