November 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಅವರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಒಕ್ಕಲಿಗ ಗೌಡರ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿದ್ದ ಅದ್ದೂರಿ ಸಂಭ್ರಮದ ಕಾರ್ಯಕ್ರಮ ‘ಗೌಡರೆ ಗೌಜಿ ಗಮ್ಮತ್’ನಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಅವರನ್ನು ನ. 22ರಂದು ಗಣ್ಯರ ಸಮ್ಮುಖದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಕಲಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು,ಸಮಾಜದ ವಿವಿಧ ಕ್ಷೇತ್ರಗಳ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಪ್ರೇರಣೆ ನೀಡುತ್ತಿರುವ ಸಂಪತ್ ಬಿ. ಸುವರ್ಣ ಅವರ ಬಹುಮುಖ ಸಮಾಜಸೇವೆಯನ್ನು ಗುರುತಿಸಿ ಈ ಗೌರವ ಸಲ್ಲಿಸಲಾಯಿತು.

ಸಮಾಜದ ಅಭಿವೃದ್ಧಿ, ಸಾಂಸ್ಕೃತಿಕ ಚಟುವಟಿಕೆಗಳ ಉತ್ತೇಜನ ಹಾಗೂ ಪ್ರತಿಭಾವಂತರಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಅವರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ. ಇಂತಹ ಸೇವಾ ಮನೋಭಾವದ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ ಮೂಲಕ ಸಮಾಜದಲ್ಲಿ ಮತ್ತಷ್ಟು ಸಕಾರಾತ್ಮಕ ಕಾರ್ಯಗಳಿಗೆ ಪ್ರೇರಣೆ ನೀಡಿದಂತಾಗಿದೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಸುರೇಶ್ ಕೌಡಂಗೆ, ನವೀನ್ ಬಿ.ಕೆ.,ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗೀತಾ ರಾಮಣ್ಣ ಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

47ನೇ ದಸರಾ ಯೋಗಾಸನ, ಪ್ರಾಣಾಯಾಮ, ಧ್ಯಾನ ಶಿಬಿರಕ್ಕೆ ಚಾಲನೆ

Suddi Udaya
error: Content is protected !!