November 23, 2026
ಗ್ರಾಮಾಂತರ ಸುದ್ದಿರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ಪ್ರತಿಭಟನೆ ಕಾಲ್ನಡಿಗೆ ಜಾಥಾ

ಪದ್ಮುಂಜ : (ನ. 23) ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ಬೃಹತ್ ಪ್ರತಿಭಟನೆ ನವೆಂಬರ್ 23 ರಂದು ಪದ್ಮುಂಜ ಮುಖ್ಯ ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ನೀತಿಗಳ ವಿರುದ್ಧ ಕಿಡಿಕಾರಿದರು. ಪ್ರತಿಭಟನೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಜೋಯಲ್ ಮಂಡೋನ್ಸ ಮಡoತ್ಯಾರು, ಹಾಗೂ ಜಿಲ್ಲಾ ಮನ್ ಕೀ ಬಾತ್ ಸಂಚಾಲಕರಾದ ಸೀತಾರಾಮ್ ಬೆಳಾಲು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ ಪೆರ್ಲ -ಬೈಪಾಡಿ,ನೆರೆದ ಗ್ರಾಮಸ್ಥರನ್ನು ಉದ್ದೇಶಿಸಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ನೀತಿಗಳ ವಿರುದ್ಧ ಎಳೆ ಎಳೆಯಾಗಿ ವಿವರಿಸಿದರು.

ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್,ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುನಿಲ್ ಅನವು, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ,ಉರುವಾಲು ಶಕ್ತಿ ಕೇಂದ್ರ ಪ್ರಮುಖರಾದ ಕೃಷ್ಣಪ್ರಸಾದ್ ಮಜಿಕುಡೇಲ್ ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿಯ ಹಲವು ಪ್ರಮುಖರು, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು. ಕಣಿಯೂರು ಶಕ್ತಿ ಕೇಂದ್ರ ಪ್ರಮುಖರು ಯುವ ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಕಣಿಯೂರು ಪಂಚಾಯತ್ ಬಳಿ ತೆರಳಿ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಲಾಯಿತು.

Related posts

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya
error: Content is protected !!