ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಅವಕಾಶಗಳನ್ನು ಕಲ್ಪಿಸುವುದು, ಶಿಕ್ಷಣದಿಂದ ವಂಚಿತರಾದ ಯುವಜನತೆಗೆ ಮರುಶಿಕ್ಷಣದ ಅವಕಾಶ ಒದಗಿಸುವುದು ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೌಶಲ್ಯ ತರಬೇತಿಯ ಮೂಲಕ ಯುವಜನರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಳೆದ ಸುಮಾರು ೧೭ ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿರುವ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದ ಸಾಧಕ ಎಂ.ಜಿ. ತಲ್ಹತ್ ಸವಣಾಲು ಅವರಿಗೆ ೨೦೨೬ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ ಗೌರವವಾದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ೨೦೨೬ರ ಅಂಗವಾಗಿ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತಾ ಶ್ರೇಷ್ಠತಾ ಪ್ರಶಸ್ತಿ-೨೦೨೬ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ವರ್ಣ ಭಾರತ್ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಈ ಗೌರವವನ್ನು ನೀಡಿ ಸನ್ಮಾನಿಸಲಾಯಿತು. ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ನಿರಂತರ ಸೇವೆ, ಪರಿಶ್ರಮ, ನಾಯಕತ್ವ ಮತ್ತು ಮುಂದಿನ ಶೈಕ್ಷಣಿಕ ಅಭಿವೃದ್ಧಿಯ ದೂರದೃಷ್ಟಿಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ತಲ್ಹತ್ ಎಂ.ಜಿ. ಸವಣಾಲು ಅವರು ಮಾತನಾಡಿ “ಈ ಪ್ರಶಸ್ತಿ ನನ್ನೊಬ್ಬನ ವೈಯಕ್ತಿಕ ಸಾಧನೆಯಲ್ಲ. ಕಳೆದ ಸುಮಾರು ೧೭ ವರ್ಷಗಳಿಂದ ನಾವು ಶಿಕ್ಷಣ ಕ್ಷೇತ್ರದಲ್ಲಿ ನಡೆಸಿಕೊಂಡು ಬಂದಿರುವ ನಿರಂತರ ಪ್ರಯತ್ನಕ್ಕೆ ದೊರೆತ ಪ್ರೋತ್ಸಾಹ ಮತ್ತು ಗೌರವವಾಗಿದೆ. ನನ್ನ ಈ ಶೈಕ್ಷಣಿಕ ಪಯಣದಲ್ಲಿ ಸಹಕರಿಸಿದ ಎಲ್ಲಾ ನಿರ್ದೇಶಕರು, ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು, ಹಿತೈಷಿಗಳು ಹಾಗೂ ನನ್ನ ಕುಟುಂಬದ ಪ್ರತಿಯೊಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದರು.

ಗ್ರಾಮೀಣ ಶಿಕ್ಷಣದ ಅಭಿವೃದ್ಧಿಗೆ ೧೭ ವರ್ಷಗಳ ನಿರಂತರ ಸೇವೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ರಿಕ್ಷಾ ಇಸುಬಾಕ ಅವರ ಪುತ್ರರಾದ ತಲ್ಹತ್ ಎಂ. ಜಿ. ಸವಣಾಲು ಅವರು ಶಿಕ್ಷಣದ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕೆಂಬ ಉದ್ದೇಶದಿಂದ ತಮ್ಮ ಶೈಕ್ಷಣಿಕ ಸೇವಾ ಪಯಣವನ್ನು ಆರಂಭಿಸಿದರು. ಶಿಕ್ಷಕರಾಗಿ ವೃತ್ತಿಜೀವನ ಆರಂಭಿಸಿ, ಸಂಸ್ಥೆಯ ಪ್ರಾಂಶುಪಾಲರಾಗಿ ಹಾಗೂ ನಂತರ ಆಡಳಿತ ಮತ್ತು ಸಂಸ್ಥೆಯ ನಿರ್ವಹಣಾ ಜವಾಬ್ದಾರಿಗಳನ್ನು ವಹಿಸಿಕೊಂಡು ಸುಮಾರು ೧೭ ವರ್ಷಗಳ ಅನುಭವದೊಂದಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ.ಇವರು ಅನುಗ್ರಹ ಎಜುಕೇಶನ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ (ರಿ.) ಅನ್ನು ಸ್ಥಾಪಿಸಿ ಅದರ ಚೇರ್ಮನ್ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಟ್ರಸ್ಟ್ನ ಅಧೀನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜನ್ನು ಸ್ಥಾಪಿಸಿ ಬೆಳ್ತಂಗಡಿ ಹಾಗೂ ಮಂಗಳೂರಿನ ಮುಡಿಪಿನಲ್ಲಿ ಶಿಕ್ಷಣ ಸೇವೆಯನ್ನು ವಿಸ್ತರಿಸಿದ್ದಾರೆ. ತಾಂತ್ರಿಕ, ವೃತ್ತಿಪರ ಹಾಗೂ ಪ್ರೊಫೆಷನಲ್ ಡಿಪ್ಲೋಮಾ ಶಿಕ್ಷಣದ ಜೊತೆಗೆ ಉದ್ಯೋಗಮುಖಿ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುತ್ತಿದ್ದಾರೆ.

ಶಿಕ್ಷಣದಿಂದ ವಂಚಿತರಾದವರಿಗೆ ಮತ್ತೊಂದು ಅವಕಾಶ: ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದ ಕುಟುಂಬಗಳ ವಿದ್ಯಾರ್ಥಿಗಳು, ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿದ ಯುವಜನರು ಹಾಗೂ SSಐಅ ಮತ್ತು PUಅ ಪರೀಕ್ಷೆಗಳಲ್ಲಿ ನಿರೀಕ್ಷಿತ ಯಶಸ್ಸು ಪಡೆಯದ ವಿದ್ಯಾರ್ಥಿಗಳಿಗೆ ಮತ್ತೆ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸುವುದು ಇವರ ಪ್ರಮುಖ ಆಶಯವಾಗಿದೆ. ಕೇವಲ ಪ್ರಮಾಣಪತ್ರ ಆಧಾರಿತ ಶಿಕ್ಷಣಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ, ಉದ್ಯೋಗ ಕೌಶಲ್ಯ, ತಾಂತ್ರಿಕ ತರಬೇತಿ, ಸ್ವಯಂ ಉದ್ಯೋಗದ ಮಾರ್ಗದರ್ಶನ ಹಾಗೂ ಉದ್ಯಮಶೀಲತೆಯ ಅರಿವು ಮೂಡಿಸುವ ಕಾರ್ಯಕ್ಕೆ ಆದ್ಯತೆ ನೀಡುತ್ತಿದ್ದಾರೆ.ಅನುಗ್ರಹ ಟ್ರೈನಿಂಗ್ ಕಾಲೇಜಿನ ಮೂಲಕ ವಿವಿಧ ತಾಂತ್ರಿಕ ಮತ್ತು ವೃತ್ತಿಪರ ಡಿಪ್ಲೋಮಾ ಕೋರ್ಸ್ಗಳನ್ನು ಪರಿಚಯಿಸಿ ಯುವಜನತೆಗೆ ಉದ್ಯೋಗಾವಕಾಶಗಳತ್ತ ಸಾಗಲು ಅಗತ್ಯವಾದ ತರಬೇತಿ ಒದಗಿಸಲಾಗುತ್ತಿದೆ. SSಐಅ, PUಅ ಹಾಗೂ ಪದವಿ ಹಂತದ ನೇರ ಪರೀಕ್ಷಾ ಅವಕಾಶಗಳ ಕುರಿತ ಮಾರ್ಗದರ್ಶನದ ಜೊತೆಗೆ ವೃತ್ತಿಪರ ಶಿಕ್ಷಣವನ್ನು ಸಂಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಯತ್ನ ನಡೆಯುತ್ತಿದೆ.
ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯೊAದಿಗೆ ದೀರ್ಘಕಾಲದ ಶೈಕ್ಷಣಿಕ ಸಂಬAಧ:ಅನುಗ್ರಹ ಟ್ರೈನಿಂಗ್ ಕಾಲೇಜು ಕಳೆದ ೧೫ ವರ್ಷಗಳಿಗೂ ಅಧಿಕ ಕಾಲದಿಂದ ಮುಂಬೈನ ಇಂಡಿಯನ್ ಟೆಕ್ನಿಕಲ್ ಎಜುಕೇಶನ್ ಬೋರ್ಡ್ನ ಸಹಯೋಗ ಮತ್ತು ಮಾನ್ಯತಾ ಸಂಬAಧದೊAದಿಗೆ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಈ ದೀರ್ಘಕಾಲದ ಶೈಕ್ಷಣಿಕ ಪಯಣದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಅವಕಾಶಗಳನ್ನು ತಲುಪಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ.ಸಂಸ್ಥೆಯ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಗುರುತಿಸಿ ಮುಂಬೈನ ಇಂಡಿಯನ್ ಟೆಕ್ನಿಕಲ್ ಎಜುಕೇಶನ್ ಬೋರ್ಡ್ ವತಿಯಿಂದ ಈ ಹಿಂದೆ ಃesಣ Iಟಿsಣiಣuಣioಟಿ ಂತಿಚಿಡಿಜ ನೀಡಿ ಗೌರವಿಸಲಾಗಿತ್ತು. ಅದೇ ರೀತಿ ೨೦೧೮ರಲ್ಲಿ ಬೆಂಗಳೂರಿನ ಒಇಊಂZ ಈouಟಿಜಚಿಣioಟಿ ಓಉಔ ವತಿಯಿಂದ ಃesಣ ಗಿoಛಿಚಿಣioಟಿಚಿಟ ಇಜuಛಿಚಿಣioಟಿ Seಡಿviಛಿe ಂತಿಚಿಡಿಜ ನೀಡಿ ಸನ್ಮಾನಿಸಲಾಗಿತ್ತು.ಶಿಕ್ಷಣದ ಜೊತೆಗೆ ಸಾಮಾಜಿಕ ಮತ್ತು ಧಾರ್ಮಿಕ ಸೇವೆ:ಶೈಕ್ಷಣಿಕ ಕ್ಷೇತ್ರದ ಜೊತೆಗೆ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಸಂಘ ಸಂಸ್ಥೆಗಳಲ್ಲಿಯೂ ತಲ್ಹತ್ ಎಂ. ಜಿ. ಸವಣಾಲು ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. “ಅವರು ಬದ್ರಿಯಾ ಜುಮಾ ಮಸೀದಿ, ಸವಣಾಲು ಇದರ ಪ್ರಧಾನ ಕಾರ್ಯದರ್ಶಿಯಾಗಿ, ಎಅI ಉಜಿರೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಜಾಮಿಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಸದಸ್ಯರಾಗಿ ಹಾಗೂ ಬೆಳ್ತಂಗಡಿ ವರ್ತಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣದ ಅಭಿವೃದ್ಧಿ, ಯುವಜನರ ಸಬಲೀಕರಣ, ಸಾಮಾಜಿಕ ಸಾಮರಸ್ಯ ಮತ್ತು ಸಮುದಾಯದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ.
ಬೆಳ್ತಂಗಡಿಯಲ್ಲಿ ಇಂಟಿಗ್ರೇಟೆಡ್ ಪದವಿ ಶಿಕ್ಷಣ ಸಂಸ್ಥೆ ಸ್ಥಾಪನೆಯ ಮಹತ್ವಾಕಾಂಕ್ಷೆ: ತಲ್ಹತ್ ಎಂ.ಜಿ. ಸವಣಾಲು ಅವರ ಮುಂದಿನ ಪ್ರಮುಖ ಕನಸು ಬೆಳ್ತಂಗಡಿ ತಾಲೂಕಿನಲ್ಲಿ ಗುಣಮಟ್ಟದ ಇಂಟಿಗ್ರೇಟೆಡ್ ಪದವಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವುದಾಗಿದೆ. ಪದವಿ ಶಿಕ್ಷಣದ ಜೊತೆಗೆ ತಾಂತ್ರಿಕ ಶಿಕ್ಷಣ, ವೃತ್ತಿಪರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಪ್ರಾಯೋಗಿಕ ತರಬೇತಿ ಮತ್ತು ಉದ್ಯೋಗ ಮಾರ್ಗದರ್ಶನವನ್ನು ಒಂದೇ ಸೂರಿನಡಿ ಒದಗಿಸುವ ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವುದು ಅವರ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ದೂರದ ನಗರಗಳನ್ನು ಅವಲಂಬಿಸದೆ ತಮ್ಮದೇ ತಾಲೂಕಿನಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು. ಪದವಿಯೊಂದಿಗೆ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಗಳಿಸಿ, ಉದ್ಯೋಗ ಹುಡುಕುವವರಾಗಿರದೆ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಹೊಂದಿದ ಯುವಜನರಾಗಿ ಬೆಳೆಯಬೇಕು ಎಂಬುದು ಅವರ ದೂರದೃಷ್ಟಿಯಾಗಿದೆ.













