ಬೆಳ್ತಂಗಡಿ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.22ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಅಪೂರ್ವ, ದಂತವೈದ್ಯರು, ಡಾ.ಸಯ್ಯದ್ ಫಿರೋಝ್, ವೈದ್ಯಾಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

180ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕರಾದ ದಿವ್ಯಜ್ಯೋತಿ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.













