November 24, 2026
Uncategorizedಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ನ. 21ರಂದು ಗುರುವಾಯನಕೆರೆ ನಮ್ಮೂರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು.

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದರು. ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ 7ನೇ ತರಗತಿಯ ಸಾನಿಧ್ಯ ಹೆಬ್ಬಾರ್ ಪ್ರಥಮ ಸ್ಥಾನ ಪಡೆದರೆ, ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ 7ನೇ ತರಗತಿಯ ನಮಸ್ವಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾದರು.ಪ್ರೌಢಶಾಲಾ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ ಸಾನಿಧ್ಯ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಸ್ಪರ್ಧೆಯು ನ. 23ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯಲ್ಲಿ ನಡೆಯಲಿದೆ.ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮತ್ತಷ್ಟು ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.

Related posts

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya
error: Content is protected !!