November 24, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣೆ: ರೂ.45 ಲಕ್ಷ ವಿದ್ಯಾರ್ಥಿ ವೇತನ ನೀಡಿ ಗೌರವ

ಎಸ್ ಡಿ ಎಂ ಕಾಲೇಜು ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ನೀಡುತ್ತದೆ. ವಿದ್ಯಾರ್ಥಿಗಳಿಗೆ ಜೀವನ ಸಂಸ್ಕಾರವನ್ನು ನೀಡುವ ಸಂಸ್ಥೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆ. ಬಾಹ್ಯ ಸೌಂದರ್ಯವನ್ನು ಮೀರಿ ಆಂತರಿಕ ಸೌಂದರ್ಯವನ್ನು ನೀಡುವಂತಹ ಕಾಲೇಜು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳು. ಹೆಗ್ಗಡೆಯವರ ಮುಗ್ಧತೆ ಹಾಗೂ ಕಾರ್ಯವೈಖರಿ ಪ್ರತಿ ವಿದ್ಯಾರ್ಥಿ ಜೀವನಕ್ಕೆ ದಾರಿ ದೀಪ. ಉತ್ತಮ ವ್ಯಕ್ತಿಗಳ ಪ್ರಭಾವ ವಿದ್ಯಾರ್ಥಿಗಳ ಜೀವನದಲ್ಲಿ ದೊರಕಬೇಕು. ಆಗ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ. ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳು ಇಂತಹ ಶಿಕ್ಷಣ ನೀಡುವಲ್ಲಿ ಉತ್ತಮ ಪಾತ್ರ ವಹಿಸುತ್ತದೆ ಎಂದು ಶಿಕ್ಷಕ ಹಾಗೂ ರಾಷ್ಟ್ರ ಮಟ್ಟದ ವ್ಯಕ್ತಿತ್ರ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕೆ ಹೇಳಿದರು.

ಇವರು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಉಜಿರೆಯ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನವೆಂಬರ್ 24 ರಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾರ್ಥಿ ವೇತನ ಪೂರಕವಾಗುತ್ತದೆ. ಸೋಲೇ ಗೆಲುವಿನ ಸೋಪಾನ. ಪುಸ್ತಕಗಳನ್ನು ಓದಿ ಸಿಗುವ ಜ್ಞಾನ ಜೀವನಕ್ಕೆ ಪ್ರೇರಣೆ ನೀಡುತ್ತದೆ. ಸೋತು ಗೆದ್ದವರ ಕಥೆಗಳು ಜೀವನಕ್ಕೆ ದಾರಿ ದೀಪವಾಗುತ್ತದೆ. ಕೌಶಲ್ಯ ಏಕಾಗ್ರತೆ ಹಾಗೂ ಕ್ರಿಯಾಶೀಲತೆ ಯಶಸ್ವಿ ಜೀವನದ ಅಡಿಪಾಯ. ಭ್ರಮೆಯಲ್ಲಿ ಬದುಕದೆ ವಾಸ್ತವತೆಯನ್ನು ಅರಿತು ಬದುಕುವುದು ಜೀವನದ ಅತೀ ಮುಖ್ಯ ಉದ್ದೇಶ. ಸಮಾಜಮುಖಿ ಕಾರ್ಯಕ್ರಮಗಳು ಜೀವನಕ್ಕೆ ಉತ್ತಮ ಭವಿಷ್ಯ ನೀಡುತ್ತದೆ ಎಂದು ರಾಜೇಂದ್ರ ಭಟ್ ಕೆ ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 95 ಕ್ಕಿಂತ ಹೆಚ್ಚು ಅಂಕ ಗಳಿಸಿದ ಸುಮಾರು 324 ವಿದ್ಯಾರ್ಥಿಗಳಿಗೆ ಸುಮಾರು ನಲವತ್ತೈದು ಲಕ್ಷ ರೂಪಾಯಿ ವಿದ್ಯಾರ್ಥಿ ವೇತನವನ್ನು ನೀಡಿ ಗೌರವಿಸಲಾಯಿತು.

ಪೂಜ್ಯ ಹೆಗ್ಗಡೆಯವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ ರಸ ಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾಗರಿಕಾ ನಾ ಕಂಡಂತೆ ಪೂಜ್ಯರು ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿದ್ಯಾರ್ಥಿ ವೇತನವನ್ನು ವಿತರಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ ಸತೀಶ್ಚಂದ್ರ ಎಸ್ ಮಾತನಾಡಿ, ಪಡೆದ ವೇತನವನ್ನು ಸಮಾಜಮುಖಿ ಕಾರ್ಯಕ್ರಮಗಳಿಗೆ ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ ಎಸ್ ಎನ್ ಕಾಕತ್ಕರ್, ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲ ಡಾ ರಾಜೇಶ್ ಬಿ, ಎಸ್ ಡಿ ಎಂ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುನೀಲ್ ಪಂಡಿತ್, ಉಪ ಪ್ರಾಂಶುಪಾಲ ಮನೀಶ್ ಕುಮಾರ್ ಉಪಸ್ಥಿತರಿದ್ದರು.ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ಸ್ವಾಗತಿಸಿ, ಎಸ್ ಡಿ ಎಂ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುನೀಲ್ ಪಂಡಿತ್ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿಯರಾದ ವೈದೇಹಿ ಎಸ್ ಮತ್ತು ನಿಹಾರಿಕಾ ಜಿ ಎನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya
error: Content is protected !!